ಕಮಲನಗರ.18.ಜೂನ್.25:- ಕಮಲನಗರ ತಾಲ್ಲೂಕಿನ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯ ರಸ್ತೆಯಲ್ಲಿ ಸಾರಿಗೆ ಬಸ್‌ನ ಸ್ಟೇರಿಂಗ್ ಜಾಮ್ ಆಗಿ ರಸ್ತೆ ಬದಿಯಲ್ಲಿ ಮಂಗಳವಾರ ಪಲ್ಟಿಯಾಗಿದೆ. ಎಂಟು ಜನರಿಗೆ ಗಾಯಗೊಂಡಿದ್ದಾರೆ.
ಔರಾದ್ ಸಾರಿಗೆ ಘಟಕಕ್ಕೆ ಸೇರಿದ ಈ ಬಸ್ ಉದಗೀರ್- ಔರಾದ್ ವಾಯಾ ಕಮಲನಗರ ಮಾರ್ಗವಾಗಿ ಔರಾದ್ ಪಟ್ಟಣಕ್ಕೆ ತೆರಳುತ್ತಿತ್ತು.
ಗಂಭೀರ ಗಾಯಗೊಂಡ ಪ್ರಯಾಣಿಕರನ್ನು ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿರುವುದು
ಈ ವೇಳೆ ಕೋಟಗ್ಯಾಳ-ಡೋಣಗಾಂವ(ಎಂ) ಕ್ರಾಸ್ ಮಧ್ಯದ ಮುಖ್ಯರಸ್ತೆಯಲ್ಲಿ ಸ್ಟೇರಿಂಗ್ ಜಾಮ್ ಆಗಿ ಬಸ್ ರಸ್ತೆ ಪಕ್ಕದ ತಗ್ಗಿನಲ್ಲಿ ಉರುಳಿ ಬಿದ್ದಿದೆ. ಬಸ್‍ನಲ್ಲಿ 55 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಆ ಪೈಕಿ 8 ಜನರಿಗೆ ಗಾಯಗಳಾಗಿವೆ. ಕಮಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಐವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೂವರು ಪ್ರಯಾಣಿಕರಿಗೆ ಬೀದರ್ ಮತ್ತು ಉದಗೀರ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…
ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ ಸಮಾಜಕ್ಕೆ ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…
ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…
ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…
ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…