ಕರಕ್ಯಾಳದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ 134ನೇ ಜಯಂತಿ ಭವ್ಯವಾಗಿ ಆಚರಣೆ

ಔರಾದ.29.ಏಪ್ರಿಲ್.25:- ಇಂದು ಔರಾದ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಭಾರತದ ಮಹಾನ್ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ದಲಿತ ಸಂಘರ್ಷ ಸಮಿತಿಯ ಔರಾದ ತಾಲೂಕಾ ಅಧ್ಯಕ್ಷರಾದ ಶ್ರೀ ಪ್ರಕಾಶ ಭಂಗಾರೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಔರಾದ ತಾಲೂಕಾ ಅಧ್ಯಕ್ಷ ಶ್ರೀ ಆನಂದ ಕಾಂಬಳೆ ಉಪಸ್ಥಿತರಿದ್ದರು.

ಕಾರ್ಯಕ್ರಮದ ಉದ್ಘಾಟಕರಾಗಿ ಮತ್ತು ಮುಖ್ಯ ಭಾಷಣಕಾರರಾಗಿ NSYF ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ ಸ್ಫೂರ್ತಿದಾಯಕ ಭಾಷಣ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಸುರೇಶ ಕಾಂಬಳೆ ವಹಿಸಿದ್ದರು, ಶ್ರೀ ರಾಹುಲ್ ಮೇತ್ರೆ, ಶ್ರೀ ರಾಮ ಮೊರೆ, ಶ್ರೀ ಸಂತೋಷ ಕಾಂಬಳೆ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಆಶಯ ವ್ಯಕ್ತಪಡಿಸಿದರು.

ಶಿವಕುಮಾರ ಕಾಂಬಳೆ: “ಬಾಬಾ ಸಾಹೇಬರನ್ನು ಜಾತಿ-ಧರ್ಮದ ಸೀಮಿತದಲ್ಲಿ ನಿರ್ಬಂಧಿಸಬೇಡಿ”

ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ NSYF ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ ಅವರು, “ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಯಾವುದೇ ಜಾತಿ ಅಥವಾ ಧರ್ಮಕ್ಕೆ ಮಾತ್ರ ಸೀಮಿತ ವ್ಯಕ್ತಿತ್ವವಲ್ಲ. ಅವರು ಜಗತ್ತಿನ ಪ್ರತಿಯೊಬ್ಬ ನಾಗರಿಕನಿಗೂ ಆದರ್ಶವಾಗಿದ್ದಾರೆ. ಅವರ ಹೆಗ್ಗಳಿಕೆಗೆ ವಿಶ್ವ ಸಂಸ್ಥೆಯು ‘ಜ್ಞಾನದ ಸಂಕೇತ’ ಎಂಬ ಬಿರುದು ನೀಡಿದೆ” ಎಂದು ಹೇಳಿದರು.

ಅವರು ಮುಂದಾಗಿ, “ಇಂದಿನ ಬಡ ಸಮುದಾಯದ ಪೋಷಕರು ತಮ್ಮ ಮಕ್ಕಳಿಗೆ ಬಾಬಾ ಸಾಹೇಬರ ವಿಚಾರಧಾರೆಗಳನ್ನು ಪರಿಚಯಿಸಿ, ಅವರ ಮಾರ್ಗದರ್ಶನದಲ್ಲಿ ಅವರನ್ನು ಬೆಳೆಸಬೇಕು” ಎಂಬ ಸಲಹೆಯನ್ನು ನೀಡಿದರು.

ಸ್ಥಳೀಯ ನಾಗರಿಕರ ಸಹಭಾಗಿತ್ವದಿಂದ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿತು

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

42 minutes ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

10 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

15 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

15 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

20 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago