ಬೀದರ 16.ಜನವರಿ.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ಬೀದರ ಜಿಲ್ಲಾ ವ್ಯಾಪ್ತಿಯಲ್ಲಿ ಹೊಸದಾಗಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಅರ್ಹ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು “ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೇಡೆ” ಎಂಬ ಧ್ಯೇಯ ವಾಕ್ಯದೊಂದಿಗೆ ಉನ್ನತ ಶಿಕ್ಷಣವನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸುತ್ತಾ ಶಿಕ್ಷಣ ವಂಚಿತರಿಗೆ ಶಿಕ್ಷಣ ಪಡೆಯುವ ಸೌಲಭ್ಯವನ್ನು ನೀಡುವುದು ವಿಶ್ವವಿದ್ಯಾನಿಲಯದ ಮುಖ್ಯ ಧ್ಯೇಯೋದ್ದೇಶವಾಗಿದೆ.
ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯವು ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಪ್ರಾದೇಶಿಕ ಕೇಂದ್ರ ಮತ್ತು ಕಲಿಕಾರ್ಥಿ ಸಹಾಯ ಕೇಂದ್ರವನ್ನು ಸ್ಥಾಪಿಸಿ ಕಾರ್ಯನಿರ್ವಹಿಸುತ್ತಾ ಬರುತ್ತಿದೆ.
ಆಸಕ್ತರು ಕರಾಮುವಿಯ ಅಧಿಕೃತ ವೆಬ್‍ಸೈಟ್ https://ksouportal.com/reg_sc/StudyCentreRegistrationnew.aspx ನಲ್ಲಿ ಅನ್‍ಲೈನ್ ಮೂಲಕ ದಿನಾಂಕ: 18-01-2025 ರೊಳಗೆ ಅರ್ಜಿಯನ್ನು ಸಲ್ಲಿಸಿದ ನಂತರ ಭರ್ತಿ ಮಾಡಿರುವ ಅರ್ಜಿಯನ್ನು ಡೀನ್ (ಅ.ಕೇಂ) ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮುಕ್ತ ಗಂಗೋತ್ರಿ, ಮೈಸೂರು-570006 ಇಲ್ಲಿಗೆ ಸಲ್ಲಿಸಬೇಕು.
ಮುಂದುವರೆದು ಬೀದರ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಸಹ ಕಲಿಕಾರ್ಥಿ ಸಹಾಯ ಕೇಂದ್ರ ಸ್ಥಾಪನೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಆಗೂ ಇವರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9986696487 ಗಎ ಸಂಪರ್ಕಿಸುವಂತೆ ಪ್ರಾದೇಶಿಕ ನಿರ್ದೇಶಕರು ಕರಾಮುವಿ ಪ್ರಾದೇಶಿಕ ಕೇಂದ್ರ ಬೀದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…