ಬೀದರ.01.ಜೂನ್.25:- ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ NAAC A+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರದಲ್ಲಿ ಶೈಕ್ಷಣಿಕ ವರ್ಷ 2025-26ರ ಜುಲೈ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಬಿ.ಎ/ಬಿ.ಕಾಂ /ಬಿ.ಎಸ್ಸಿ /ಬಿ.ಬಿ.ಎ /ಬಿ.ಸಿ.ಎ /ಬಿ.ಎಸ್.ಡಬ್ಲೂö್ಯ/ ಬಿ.ಲಿಬ್.ಐ.ಎಸ್ಸಿ / ಎಂ.ಎ /ಎಂ.ಎಸ್.ಡಬ್ಲೂö್ಯ /ಎಂ.ಕಾA /ಎಂ.ಸಿ.ಎ / ಎಂ.ಲಿಬ್.ಐ.ಎಸ್ಸಿ / ಎಂ.ಎಸ್ಸಿ /ಎಂ.ಬಿ.ಎ ಮತ್ತು ಯುಜಿ/ಪಜಿ/ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರವೇಶಾತಿಯ ಅಂತಿಮ ದಿನಾಂಕವನ್ನು ಯುಜಿಸಿ ಪ್ರಕಟಿಸಿದ ನಂತರ ತಿಳಿಸಲಾಗುವುದು. ವಿದ್ಯಾರ್ಥಿಗಳಿಗೆ ಸುವರ್ಣವಕಾಶ ಎರಡು ಶೈಕ್ಷಣಿಕ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ಅಧ್ಯಯನ ಮಾಡಲು ಅವಕಾಶವಿರುತ್ತದೆ. ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರ ಶಿಕ್ಷಣ ಕ್ರಮದಲ್ಲಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
ಅಲ್ಪಸಂಖ್ಯಾತ (ಮುಸ್ಲಿಂ, ಕ್ರೆöÊಸ್ತ, ಜೈನ, ಬೌದ್ಧ, ಸಿಖ್ಖ ಹಾಗೂ ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳು ಉಚಿತವಾಗಿ ಪ್ರವೇಶಾತಿ ಪಡೆಯಬಹುದು.
ಆಸಕ್ತರು https://ksouportal.com/views/studenthome.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯಾ ಶಿಕ್ಷಣಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಸಾರ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ,್ರ ಬೀದರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಈ ದೂರವಾಣಿ ಸಂಖ್ಯೆಗಳಿಗೆ 9986696487, 9901216737 ಕರೆ ಮಾಡಲು ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ, ಬೀದರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.