ಕರ್ಣಾಟಕ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ.!

ಕಲಬುರಗಿ : 11.ಜನವರಿ.25 :-ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿವಿಧ ಸ್ನಾತಕೋತ್ತರ ಕೋರ್ಸ್ ಗಳಿಗೆ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) ಅರ್ಜಿ ಸಲ್ಲಿಸುವ ಪ್ರಕ್ರಿಯೆಯು 02 ಜನವರಿ.25 ರಿಂದ ಅರ್ಜಿ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಒಂದು ಬಿ.ಎಡ್ ಕೋರ್ಸ್ ಸೇರಿದಂತೆ 30 ಸ್ನಾತಕೋತ್ತರ ಕೋರ್ಸ್ ಗಳಿಗೆ 600 ಸೀಟುಗಳು ಲಭ್ಯವಿರುತ್ತವೆ. CUET ಅನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ವಿಧಾನದಲ್ಲಿ ನಡೆಸಲಾಗುವುದು ಎಂದರು.

ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅರ್ಜಿ ನಮೂನೆಗಳ ಆನ್ಲೈನ್ ಸಲ್ಲಿಕೆ ಜ.2 ರಿಂದ ಫೆ.1 ರವರೆಗೆ ತೆರೆದಿರುತ್ತದೆ. ಅಭ್ಯರ್ಥಿಗಳು https://pg cuet.samarth.ac.in/ ನಲ್ಲಿಯೂ ಅರ್ಜಿ ಸಲ್ಲಿಸಬಹುದು, ಇದರ ವಿವರಗಳು CUK ವೆಬ್ಸೈಟ್ www.cuk.ac.in ನಲ್ಲಿ ಲಭ್ಯವಿದೆ. ಪರೀಕ್ಷಾ ಶುಲ್ಕವನ್ನು ಪಾವತಿಸಲು ಫೆ.2ರಂದು ಕೊನೆಯ ದಿನಾಂಕವಾಗಿದೆ.

ಆನ್ಲೈನ್ ಪೆಮೆಂಟ್ online Payment

ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ UPI ಮೂಲಕವೂ ಪೇಮೆಂಟ್ ಮಾಡಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಫೆ.3 ರಿಂದ 5 ರವರೆಗೆ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಗಳ ವಿವರಗಳಲ್ಲಿ ತಿದ್ದುಪಡಿ ಮಾಡಲು ಅವಕಾಶವಿದೆ. ಪರೀಕ್ಷಾ ಕೇಂದ್ರಗಳನ್ನು ಮಾರ್ಚ್ ಮೊದಲ ವಾರದೊಳಗೆ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಮತ್ತು ಅಭ್ಯರ್ಥಿಗಳು ನಿಗದಿತ ಪರೀಕ್ಷೆಗಳಿಗೆ ನಾಲ್ಕು ದಿನಗಳ ಮೊದಲು NTA ವೆಬ್ಸೈಟ್ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಮಾ.13 ರಿಂದ 31 ರವರೆಗೆ ಪರೀಕ್ಷೆಗಳನ್ನು ನಡೆಸಲಾಗುವುದು.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು ದೇಶಾದ್ಯಂತ ಭಾಗವಹಿಸುವ ಇತರ ವಿಶ್ವವಿದ್ಯಾಲಯಗಳಿಗೆ ಸ್ನಾತಕೋತ್ತರ ಪ್ರವೇಶ ಪರೀಕ್ಷೆಯನ್ನು ನಡೆಸಲಿದೆ ಎಂದು ಸತ್ಯನಾರಾಯಣ ಹೇಳಿದರು.

ಹೆಚ್ಚಿನ ಕಾರ್ಯಕ್ರಮಗಳಿಗೆ ಗರಿಷ್ಠ ಪ್ರವೇಶ ಸಾಮರ್ಥ್ಯ 30, ಆದರೆ ಎಂಬಿಎಗೆ 45 ಸೀಟುಗಳು ಮತ್ತು ಬಿ.ಎಡ್ ಕೋರ್ಸ್ಗೆ 55 ಸೀಟುಗಳಿವೆ ಎಂದರು. ಎಂ.ಎಸ್ಸಿ. (ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ) ಕೋರ್ಸ್ ಗೆ, ಶೇ.50 ಸೀಟುಗಳನ್ನು CUET ಮೂಲಕ ಮತ್ತು ಶೇ.50 ಎಂಎಸ್ಸಿ-2025 (JAM) ಜಂಟಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಅದೇ ರೀತಿ ಎಂ.ಟೆಕ್ಗೆ ಶೇ.50 ಸೀಟುಗಳನ್ನು CUET ಮೂಲಕ ಮತ್ತು ಇತರ ಶೇ.50 ಗೇಟ್ ಮೂಲಕ ಭರ್ತಿ ಮಾಡಲಾಗುತ್ತದೆ. ಪ್ರತಿ ಪಿಜಿ ಕಾರ್ಯಕ್ರಮಕ್ಕೆ ನಿಗದಿಪಡಿಸಲಾದ ಒಟ್ಟು ಸೀಟುಗಳಲ್ಲಿ -ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೂರು ಸೀಟುಗಳು ಮತ್ತು ಮೂರು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮೀಸಲಿಡಲಾಗಿದೆ. ಯುಜಿ ಕೋರ್ಸ್ ನ ಆರನೇ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಬರೆಯುವವರು ಸಹ CUET-PG ಗೆ ಅರ್ಜಿ ಸಲ್ಲಿಸಬಹುದು ಎಂದರು

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಲಬುರಗಿ ಮತ್ತು ಬಳ್ಳಾರಿ ಎರಡು ಪರೀಕ್ಷಾ ಕೇಂದ್ರಗಳನ್ನು ಹೊಂದಿರುತ್ತವೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವಿವಿ ಕುಲಸಚಿವ ಆರ್.ಆರ್.ಬಿರಾದರ್, ಕೋಟಾ ಸಾಯಿಕೃಷ್ಣ, ಡಾ.ಗಣಪತಿ ಸಿನ್ನೂರ್ ಮತ್ತಿತರರು ಇದ್ದರು.

prajaprabhat

Recent Posts

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

8 minutes ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

11 minutes ago

ಸಾರಿಗೆ ನೌಕರರ ರಜೆ ರದ್ದು : ಸಾರಿಗೆ ಇಲಾಖೆ ಆದೇಶ

ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

17 minutes ago

5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.

ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…

58 minutes ago

ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಪೋಷಕರಿಗೆ ಭತ್ಯೆ : ಸರ್ಕಾರದ ಆದೇಶ

ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…

1 hour ago

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

6 hours ago