ಕರ್ಣಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮೈಸೂರು (ಕರಾಮುವಿ) ಪ್ರವೇಶಾತಿಗಾಗಿ ಅರ್ಜಿ ಆಹ್ವಾನ.!


ಬೀದರ.10.ಫೆಬ್ರುವರಿ.25:-ಶಿಕ್ಷಣಕ್ಕಾಗಿ ಹೆಸರುವಾಸಿಯಾಗಿರುವ ಹಾಗೂ ಓಂಂಅ ಂ+ ಮಾನ್ಯತೆ ಪಡೆದಿರುವ ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ, ಬೀದರ್.

“ಕರಾಮುವಿ”ಬೀದರದಲ್ಲಿ ಶೈಕ್ಷಣಿಕ ವರ್ಷ 2024-25ರ ಜನವರಿ ಆವೃತ್ತಿಯಲ್ಲಿ ಪ್ರಥಮ ವರ್ಷಕ್ಕೆ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ, ಆನ್‍ಲೈನ್ ಮೂಲಕ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್.ಡಬ್ಲ್ಯೂ, ಎಂ.ಕಾಂ, ಎಂ.ಸಿ.ಎ, ಎಂ.ಲಿಬ್.ಐ.ಎಸ್ಸಿ,  ಎಂ.ಎಸ್ಸಿ, ಎಂ.ಬಿ.ಎ ಮತ್ತು ಯುಜಿ/ಪಿಜಿ/ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಬೀದರ ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


         ವಿದ್ಯಾರ್ಥಿಗಳಿಗೆ ಸುವರ್ಣವಕಾಶ ಎರಡು ಶೈಕ್ಷಣಿಕ ಕಾರ್ಯಕ್ರಮಗಳ ಕೋರ್ಸುಗಳನ್ನು ಏಕಕಾಲದಲ್ಲಿ ಒದಲು ಅವಕಾಶವಿರುತ್ತದೆ.

ಒಂದು ಭೌತಿಕ ಕ್ರಮದಲ್ಲಿ ಮತ್ತೊಂದು ದೂರ ಶಿಕ್ಷಣ ಕ್ರಮದಲ್ಲಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ. ಬಿ.ಪಿ.ಎಲ್. ಕಾರ್ಡ ಹೊಂದಿದ ಮಹಿಳಾ ವಿದ್ಯಾರ್ಥಿನಿಯರಿಗೆ, ಡಿಫೆನ್ಸ/ಮಾಜಿ ಸೈನಿಕರಿಗೂ, ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಹಾಗೂ ಕೆಎಸ್‍ಆರ್‍ಟಿಸಿ, ಕೆಕೆಆರ್‍ಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ, ಬಿಎಚಿಟಿಸಿ ಚಾಲಕರಿಗೆ ಬೋಧನಾ ಶುಲ್ಕದಲಿ 10% ರಿಯಾಯಿತಿ ನೀಡಲಾಗಿದೆ.


            ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು ವಿ.ವಿಯ ಅಂತರ್ಜಾಲದಲ್ಲಿರುವ ಅಡ್ಮಿಷನ್ ಪೋರ್ಟಲ್  https://ksouportal.com/views/studenthome.aspx  ನಲ್ಲಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆಯಾ ಶಿಕ್ಷಣ ಕ್ರಮಗಳಿಗೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಅನುಸಾರ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರ ಬೀದರದಲ್ಲಿ ಸಲ್ಲಿಸಿ ಪ್ರವೇಶಾತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಈ ದೂರವಾಣಿ ಸಂಖ್ಯೆಗಳಿಗೆ   9986696487, 9901216737 ಗೆ ಕರೆ ಮಾಡಲು ಅಥವಾ ಖುದ್ದಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೌಬಾದ, ಬೀದರಕ್ಕೆ ಭೇಟಿ ನೀಡಿ ಪ್ರವೇಶಾತಿ ಸಂಬಂಧ ಮಾಹಿತಿ ಪಡೆಯಲು ಪ್ರಾದೇಶಿಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

3 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

8 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

9 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

9 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago