ಕರ್ಣಾಟಕ ಸರ್ಕಾರ. ಒಂದೇ ಪೋರ್ಟಲ್‌ನಲ್ಲಿ 150 ಸರ್ಕಾರಿ ಸೇವೆ.!

ಬೆಂಗಳೂರು.12.ಫೆಬ್ರವರಿ.25:-ಕರ್ನಾಟಕ ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ  30ಕ್ಕೂ ಹೆಚ್ಚು Department ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬೆಂಗಳೂರಿನಲ್ಲಿ ಇಂದು ಉದ್ಘಾಟನೆಯಾದ ಜಾಗತಿಕ ಹೂಡಿಕೆದಾರರ ಸಮಾವೇಶ 2025 ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಹೊಸ ಪೋರ್ಟಲ್ ಅನ್ನು ಉದ್ಘಾಟಿಸಿದರು.

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಲಾಗಿದೆ. ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದೆ. ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ.

ಇದರೊಂದಿಗೆ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದಾಗಿದೆ. ಸಚಿವರು ಇದರ ಪ್ರಯೋಜನ, ಏನೆಲ್ಲ ಪ್ರಮಾಣ ಪತ್ರ ಪಡೆದುಕೊಳ್ಳಬಹುದೆಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು.

ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ.

ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲ್‌ನಲ್ಲಿ ಕೂಡ ಸಿಗಲಿವೆ ಎಂದು ಅವರು ವಿವರಿಸಿದರು.

‘ಕರ್ನಾಟಕ ಉದ್ಯೋಗ ಮಿತ್ರ’: ಪ್ರಯೋಜನ

ಈ ಏಕಗವಾಕ್ಷಿ ವ್ಯವಸ್ಥೆಯಡಿ ‘ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು.

ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟಲ್‌ನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ತಿಳಿಸಿದರು.

ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ.

ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು ‘ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ರಾಜ್ಯದ ವಿವಿಧ ಇಲಾಖೆಗಳ ಸೇವೆ ಒಂದೇ ವೆಬ್ಸೈಟ್/ ಪೋರ್ಟಲ್ ಮೇಲೆ ಎದಿದ್ರೆ ಸಾಮನ್ಯ ಜನರಿಗೇ ತುಂಬಾ ಅನುಕೂಲ ವಾಗ್ಲಿದೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

1 hour ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

6 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

7 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

7 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

7 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

8 hours ago