09/06/2025 3:20 AM

Translate Language

Home » ಲೈವ್ ನ್ಯೂಸ್ » ಕರ್ನಾಟಕದ ಹವಾಮಾನ ಮುನ್ಸೂಚನೆ :01.05.2025ರ ಬೆಳಿಗ್ಗೆ 8 ಗಂಟೆವರೆಗಿನ,

ಕರ್ನಾಟಕದ ಹವಾಮಾನ ಮುನ್ಸೂಚನೆ :01.05.2025ರ ಬೆಳಿಗ್ಗೆ 8 ಗಂಟೆವರೆಗಿನ,

Facebook
X
WhatsApp
Telegram

ಬೆಂಗಳೂರು30. ಏಪ್ರಿಲ್.25:- : ಕಾಸರಗೋಡು ಜಿಲ್ಲೆಯಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ  ವಾತಾವರಣ ಇರಬಹುದು.


ಈಗಿನಂತೆ ಮೇ ಮೊದಲ 3, 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದರೂ, ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಮಳೆಯ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಶಿವಮೊಗ್ಗ ಹೊರತುಪಡಿಸಿ ಉಳಿದ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮೇ 6 ರಿಂದ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಮಳಯ ಸಾಧ್ಯತೆ ಕಡಿಮೆಯಾಗುತ್ತಿದೆ. ಆದರೂ ಒಂದೆರಡು ಕಡೆ ಸೀಮಿತ ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.


ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಬೆಂಗಳೂರು ಉತ್ತರ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ, ಸೀಮಿತ ಪ್ರದೇಶಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ ಒಳನಾಡು ಸಹಿತ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಲಕ್ಷಣಗಳಿವೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!