|

ಕರ್ನಾಟಕದ ಹವಾಮಾನ ಮುನ್ಸೂಚನೆ. 03.05.2025ರ ಬೆಳಿಗ್ಗೆ 8 ಗಂಟೆವರೆಗಿನ

ಬೆಂಗಳೂರು.02.ಮೇ.25:- ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ. ನಾಳೆ ಮುಂಜಾನೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಡುಪಿಯ ಕಾರ್ಕಳ ಸುತ್ತಮುತ್ತ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಉಳಿದ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. *ಗಾಳಿಯ ಪ್ರಭಾವ ಅಂದಾಜಿಸಲು ಸಾಧ್ಯವಾಗುತ್ತಿಲ್ಲ.


ಈಗಿನಂತೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಮೇ 6ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ.
ಈಗಿನಂತೆ ಮೇ 4ರಿಂದ ಮಲೆನಾಡು ಭಾಗಗಳಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಮೆಯಾಗುವ ಸಾಧ್ಯತೆಗಳಿದ್ದರೂ ಮೇ 6ರಿಂದ ಹೆಚ್ಚಾಗುವ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳ ಆಂದ್ರಾ ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ. ಕಲಬುರ್ಗಿ – ಮಹಾರಾಷ್ಟ್ರ ಗಡಿ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.


ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.


ಈಗಿನಂತೆ ಮೇ 4 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 6ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮತ್ತೆ ಮಳೆ ಪ್ರಾರಂಭವಾಗುವ ಸೂಚನೆಗಳಿವೆ.

Similar Posts

Leave a Reply

Your email address will not be published. Required fields are marked *