ಬೆಂಗಳೂರು.16.ಮಾರ್ಚ್.26: ರಾಜ್ಯದಲ್ಲಿ ಎರಡು ವಿಧಾನಸಭಾ ಚುನಾವಣಾ ಕ್ಷೇತ್ರಗಳಿಗೆ ಸೇರಿದಂತೆ ದೇಶಾದ್ಯಂತ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕವನ್ನು ಇಂದು ಚುನಾವಣಾ ಆಯೋಗ ಘೋಷಿನೆ ಮಾಡಲಾಗಿದೆ.
ಭಾನುವಾರದಂದು ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಅಧಿಕಾರಿ ಜ್ಞಾನೇಶ್ ಕುಮಾರ್ ‘ಗೋವಾ, ಕರ್ನಾಟಕ, ನಾಗಾಲ್ಯಾಂಡ್ ಮತ್ತು ತ್ರಿಪುರಾದಲ್ಲಿ ಐದು ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 9 ರಂದು ಮತ್ತು ಗುಜರಾತ್ ಮತ್ತು ಮಹಾರಾಷ್ಟ್ರದ ಇತರ ಮೂರು ಸ್ಥಾನಗಳಿಗೆ ಏಪ್ರಿಲ್ 23 ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಿದ್ದಾರೆ.ಎಲ್ಲಾ ಎಂಟು ಉಪಚುನಾವಣೆಗಳ ಮತ ಎಣಿಕೆ ಮೇ 4 ರಂದು ನಡೆಯಲಿದೆ.
ಹಾಲಿ ಶಾಸಕರ ನಿಧನದಿಂದಾಗಿ ಎಲ್ಲಾ ಎಂಟು ಸ್ಥಾನಗಳಿಗೆ ಉಪಚುನಾವಣೆಯನ್ನು ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರವು ಎಚ್ ವೈ ಮೇಟಿ ಅವರ ನಿಧನದಿಂದ ತೆರವಾಗಿತ್ತು, ಇನ್ನೊಂದೆಡೆಗೆ ದಾವಣಗೆರೆ ದಕ್ಷಿಣ ಕ್ಷೇತ್ರವು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿತ್ತು ಈ ಹಿನ್ನೆಲೆಯಲ್ಲಿ ಈಗ ಎರಡು ಕ್ಷೇತ್ರಗಳಿಗೆ ಉಪಚುನಾವಣೆಯನ್ನು ನಡೆಸಲಾಗುತ್ತಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಜನವರಿ 28 ರಂದು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದರಿಂದಾಗಿ ಅವರ ಕ್ಷೇತ್ರ ಬಾರಾಮತಿ ಖಾಲಿ ಉಳಿದಿತ್ತು, ಇದಷ್ಟೇ ಅಲ್ಲದೆ ಅಹಲ್ಯಾನಗರ ಜಿಲ್ಲೆಯ ರಾಹುರಿ ವಿಧಾನಸಭಾ ಕ್ಷೇತ್ರದ ಶಾಸಕ ಶಿವಾಜಿರಾವ್ ಕಾರ್ಡಿಲೆ ಅವರು ಸಹ ಇತ್ತೀಚಿಗೆ ನಿಧನರಾಗಿದ್ದರು. ಹಾಗಾಗಿ ಚುನಾವಣಾ ಆಯೋಗವು ಬಾರಾಮತಿ ಮತ್ತು ರಾಹುರಿ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 23 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ.
ಬಾರಾಮತಿ ಮತ್ತು ರಾಹುರಿ ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಈಗ ಎರಡೂ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ.ಇನ್ನೊಂದೆಡೆಗೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಿ ಪವಾರ್ ಅವರು ಬಾರಾಮತಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದ್ದರಿಂದ, ವಿರೋಧ ಪಕ್ಷವು ಈ ಸ್ಥಾನದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಬಹುತೇಕ ಕಡಿಮೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆಗೆ ರಾಹುರಿಯಲ್ಲಿ ಅವಿರೋಧವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಜೆಪಿ ಶತಾಯಗತಾಯವಾಗಿ ಪ್ರಯತ್ನಿಸುತ್ತಿದೆ.
ಚುನಾವಣಾ ಆಯೋಗದ ಪ್ರಕಾರ, ಅಸ್ಸಾಂ ಮತ್ತು ಕೇರಳ ರಾಜ್ಯಗಳು ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 9 ರಂದು, ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ. ಹಾಗೂ ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಎರಡು ಹಂತದ ಮತದಾನ ನಡೆಯಲಿದೆ. ಈ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಫಲಿತಾಂಶಗಳನ್ನು ಮೇ 4 ರಂದು ಘೋಷಿಸಲಾಗುತ್ತದೆ.






Any questions related to ಕರ್ನಾಟಕದ 2 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಫಿಕ್ಸ್.?