ಬೀದರ.28.ಏಪ್ರಿಲ್.25:- 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA Via /C.E.T/N.E.E.T ಮುಖಾಂತರ) ಎಂ.ಬಿ.ಬಿ.ಎಸ್, ಬಿ.ಡಿ.ಎಸ್., ಬಿ.ಆಯುಷ್, ಬ್ಯಾಚುಲರ ಆಫ್ ಆರ್ಕ, ಬಿ.ಇ. / ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್ ಹಾಗೂ ವೆಟರನರಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನಿಡಲಾಗುತ್ತದೆ.
C.E.T/N.E.E.T ಮುಖೇನ್ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ “ಅರಿವು” ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್: https://kmdconline.karnataka.gov.in/ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟ್‌ಔಟ್ ಪಡೆದು ಕ್ಯೂಆರ ಕೊಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪ್ರಿಯುಸಿ ಅಂಕಪಟ್ಟಿ, ಆಧಾರ ಕಾರ್ಡ, ಫೋಟೊ – 04, ಸಿಇಟಿ ಹಾಲ್‌ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ರೂ. 100 ರ ಛಾಪಾ ಕಾಗದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧ ನಿಗಮ (ನಿ), ಮೌಲಾನಾ ಆಜಾದ ಭವನ, ಗುರುನಾನಕ ಝಿರಾ ದಿಂದ ಚಿಕಪೇಟ್ ರಿಂಗ ರಸ್ತೆ, ಬೀದರ ಜಿಲ್ಲೆ ಈ ಕಛೇರಿಗೆ ಸಲ್ಲಿಸಲು ಸೂಚಿದೆ.
ಹೆಚ್ಚಿನ ಮಾಹಿತಿ ಪಡೆಯಲು ಈ ಕಛೇರಿಯ ದೂರವಾಣಿ ಸಂಖ್ಯೆ : 08482467330ಗೆ ಸಂಪರ್ಕಿಸಬಹದುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ: 23-05-2025 ರಂದು ಕೊನೆಯ ದಿನಾಂಕವಾಗಿರುತ್ತದೆAದು ಅವರು ತಿಳಿಸಿದ್ದಾರೆ.
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…