|

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.11.ಜೂನ್.25:- ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗಳಿಗೆ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in    ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ವೆಬ್‌ಸೈಟ್  https://www.kaushalkar.com/       ನಲ್ಲಿ ಅರ್ಜಿಗಳನ್ನು ದಿನಾಂಕ: 03-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್

  http://upparadevelopment.karnataka.gov.in     ದಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22252555 ಯಿಂದ ಪಡೆಯಬಹುದಾಗಿದೆ. ಹಾಗೂ ಜಿಲ್ಲೆಗಳಲ್ಲಿ ನಿಗಮದ ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *