ಬೀದರ.18.ಜನವರಿ.26:- ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಕರೆಯಲಾಗಿದ್ದು, ಅಕಾಡೆಮಿಯ ವೆಬ್ಸೈಟ್ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ದಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖವನ್ನು ಬರೆದು ದಿನಾಂಕ: 23-01-2026 ರೊಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಕಳುಹಿಸಿಕೊಡಲು ಕೋರಿದೆ. ಸಾರಲೇಖ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು.
ಫೆಲೋಶಿಪ್ಗಾಗಿ ಸಾಮಾನ್ಯ-1, ಪರಿಶಿಷ್ಟ ಜಾತಿ-5 ಮತ್ತು ಪರಿಶಿಷ್ಟ ಪಂಗಡ-9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್ಸೈಟ್ (https://janapada.karnataka.gov.in ) ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಬೆಂಗಳೂರು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ (ಪ್ರ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ’ಗೆ ಅರ್ಜಿ ಆಹ್ವಾನ?