ಕರ್ನಾಟಕ ಪಶು ವಿವಿಯ ಜಾನುವಾರು ಮೇಳದ ಪ್ರಚಾರ ಅಭಿಯಾನಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಸಚಿವ ಈಶ್ವರ್ ಖಂಡ್ರೆ.!


1.ಡಿ.25: ಬೀದರ:- ಮುಂಬರುವ 2025 ಜನವರಿ 17, 18, 19 ರಂದು ಕರ್ನಾಟಕ ಪಶು ವಿವಿಯ ಜಾನುವಾರು ಮೇಳದ ಪ್ರಚಾರ ಅಭಿಯಾನಕ್ಕೆ ಅದ್ದೂರಿ ಚಾಲನೆ ನೀಡಲಾಯಿತು.

ಭಾಲ್ಕಿಯಲ್ಲಿ ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಮ್ಮ ಮನೆಯ ಕಚೇರಿಯಲ್ಲಿ ವಿಸ್ತರಣಾ ನಿರ್ದೇಶಕರಾದ ಡಾಕ್ಟರ್ ಬಸವರಾಜ ಅವಟಿ, ಡಾ. ಎಂ ಕೆ ತಾಂಡ್ಲೆ ಹಾಗೂ ಮೇಳದ ಪ್ರಚಾರ ಸಮಿತಿಯ ಅಧ್ಯಕ್ಷರಾದ ಚನ್ನಪ್ಪ ಗೌಡ ಬಿರಾದಾರ ಅವರೊಡನೆ ಮೇಳದ ಬಿತ್ತಿ ಪತ್ರ ಬಿಡುಗಡೆ ಮಾಡಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ವಿಡಿಯೋ ಸಂದೇಶ ನೀಡಿದ ಸಚಿವರು ಕಲ್ಯಾಣ ಕರ್ನಾಟಕದ ಎಲ್ಲ ರೈತ ಬಾಂಧವರು ಹಾಗೂ ನೆರೆ ರಾಜ್ಯದ ರೈತ ಬಾಂಧವರು ಈ ಮೇಳದ ಉತ್ಕೃಷ್ಟ ತಾಂತ್ರಿಕತೆಯ ಪ್ರದರ್ಶನದ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.

ಪಶು ವಿಮೆ ಹೊಸ ವರ್ಷದ ಆರಂಭದಲ್ಲಿ ಅತ್ಯಂತ ಜನಪರ ಹಾಗೂ ರೈತ ಪರ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ರಾಜ್ಯದ ರೈತರಿಗೆ ಹೊಸ ವರ್ಷದ ಶುಭಾಶಯಗಳು ತಿಳಿಸಿದರು.


ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧಡೆ ಏಕಕಾಲಕ್ಕೆ ಪ್ರಚಾರಕ್ಕೆ ಚಾಲನೆ ನೀಡಲಾಗಿದ್ದು ಪೂಜ್ಯ ಬಸವಲಿಂಗಪಟ್ಟದ್ದೇವರು ಭಾಲ್ಕಿ ಹಿರೇಮಠ ಸಂಸ್ಥಾನ ಇವರು ಮಠದಲ್ಲಿ ಬಿತ್ತಿಪತ್ರ ಅಂಟಿಸುವ ಮೂಲಕ ವಿಡಿಯೋ ಸಂದೇಶ ನೀಡಿ ಪಶು ಮೇಳಕ್ಕೆ ಶುಭ ಹಾರೈಸಿದರು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಕರೆ ನೀಡಿ ತಾವು ಬರುವುದಾಗಿ ತಿಳಿಸಿದರು.

ಪಶ್ಚಿಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳಾದ ಡಾ. ಬಿ ವಿ ಶಿವಪ್ರಕಾಶ್ ಡಾ. ದಿಲೀಪ್ ಕುಮಾರ್ ಹಾಗೂ ಉಪ ನಿರ್ದೇಶಕರಾದ ಡಾ. ನರಸಪ್ಪ ಹಾಗೂ ಡಾ. ನೇತೃತ್ವದಲ್ಲಿ ಪಶುವೈದ್ಯಾಧಿಕಾರಿಗಳ ಎಲ್ಲರೂ ಸಭೆ ಮಾಡಿ ಎಲ್ಲ ಗ್ರಾಮಗಳಿಗೆ ಮುಟ್ಟಿಸುವದಾಗಿ ನಿರ್ಧರಿಸಿ ಬಿತ್ತಿಪತ್ರ ಬಿಡುಗಡೆ ಮಾಡಿದರು.

ಗ್ರಾಮದ ಎಲ್ಲಾ ನಿವಾಸಿ ಮುಂಬರುವ 2025 ಜನವರಿ 17, 18, 19 ರಂದು ಕರ್ನಾಟಕ ಪಶು ವಿವಿಯ ಜಾನುವಾರು ಮೇಳದಲ್ಲಿ  ಹೆಚ್ಚು ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವಂತೆ ಕರೆ ನೀಡಿ ತಾವು ಬರುವುದಾಗಿ ತಿಳಿಸಿದರು.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago