ಬೆಂಗಳೂರು.21.ಮಾರ್ಚ.25:- ರಾಜ್ಯದಲ್ಲಿ ಭಾಷಾ ವಿವಾದಕೆ ಸಂಬಂಧಿತ್ ನಾಳೆ ಕರ್ನಾಟಕ ಬಂದ್ ಬೆಳಗಾವಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕೆಲ ಸಂಘಟನೆಗಳು ಬೆಂಬಲ ನೀಡಿದ್ದು, ಶನಿವಾರ ಬೆಳಗ್ಗೆ 6ಗಂಟೆಯಿಂದಲೇ ಬಂದ್ ಆರಂಭಿಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.
ಇದರಿಂದ ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಹೀಗಾಗಿ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಒಂದೆಡೆ ಕನ್ನಡಪರ ಸಂಘಟನೆಗಳು ಮಾ. 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮತ್ತೊಂದೆಡೆ ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಹೀಗಾಗಿ ಶಾಲೆಗಳಿಗೆ ರಜೆ ಇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದು, ಈವರೆಗೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಮಧ್ಯಾಹ್ನ ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜತೆ ಸಭೆ ಮಾಡಲಾಗುತ್ತದೆ. ಅವರು ಏನು ಹೇಳುತ್ತಾರೋ, ಅದರ ಮೇಲೆ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಾರಿಗೆ ಹಾಗೂ ಭದ್ರತೆ ಇಲ್ಲದೆ ಶಾಲೆ ತೆರೆಯಲು ಆಗಲ್ಲ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಹೀಗಾಗಿ ಮುಂದೂಡಲು ನಾವು ಸಿದ್ಧವಾಗಿದ್ದೇವೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್ 22ರ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ಕೆಲವು ಸಂಘಟನೆಗಳು ಬೆಂಬಲ ನೀಡಿದೆ. ಎಲ್ಲರೂ ಬೆಂಬಲ ಕೊಡಿ. ನಮ್ಮನ್ನು ಬಂಧಿಸಲಿ, ಏನು ಬೇಕಾದರೂ ಮಾಡಲಿ, ನಾವು ಬಂದ್ ಮಾಡೇ ಮಾಡುತ್ತೇವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ ಹೆಚ್ಚಾಗಿದ್ದು, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು.
ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಪ್ರಕರಣದ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳವಳಿಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ರಾಜ್ಯದಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ರಾಜ್ಯದಲ್ಲಿ ಮತ್ತು ಕೆಲವು ಸಂಘಟನೆಗಳು ಬೆಂಬಲ ನೀಡಿದೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…