ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಜೂನ್.25:- ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಿಗೆ ಸೌಲಭ್ಯ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಹರು ಸೇವಾಸಿಂಧು ಪೋರ್ಟಲ್  http://sevasindhu.karnataka.gov.in     ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ದಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್‌ಸೈಟ್  https://www.kaushalkar.com/ ಮೂಲಕ ಅರ್ಜಿಗಳನ್ನು ದಿನಾಂಕ: 30-06-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್  www.kmmd.karnataka.gov.in     ದಲ್ಲಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಜೆಸ್ಕಾಂ ಮುನಿರಾಬಾದ್: ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಕೊಪ್ಪಳ.03.ಆಗಸ್ಟ್.25:- ಮುನಿರಾಬಾದ್ ಪವರ್ ಹೌಸ್‌ನಲ್ಲಿ 220 ಕೆ.ವಿ ಲಿಂಗಾಪುರ-ಮುನಿರಾಬಾದ್ ಲೈನ್-2 ರ ಹಾನಿಗೊಳಗಾದ ಇನ್ಸುಲೇಟರ್ ಸ್ಟ್ರಿಂಗ್‌ಗಳನ್ನು ತುರ್ತು ಆಧಾರದ ಮೇಲೆ…

4 minutes ago

ಇಂದು ಕೊಪ್ಪಳ ನಗರಕ್ಕೆ ನೀರು ಸರಬರಾಜು ಸ್ಥಗಿತ

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ನಗರಕ್ಕೆ ನೀರು ಸರಬರಾಜು ಆಗುವ ಮೂಲ ಕೇಂದ್ರವಾದ ಮುನಿರಾಬಾದ್ ಜಾಕವೆಲ್‌ನಲ್ಲಿ ಪೈಪ್‌ಲೈನ್ ಹಾಗೂ ಇನ್ನಿತರೇ ದುರಸ್ಥಿ ಕಾರ್ಯವನ್ನು…

41 minutes ago

ಆರ್‌ಟಿಐ ಮಾಹಿತಿ ಕೊಡದಿದ್ದರೆ ಅಧಿಕಾರಿಗೆ ದಂಡ : ಹರೀಶ್ ಕುಮಾರ್

ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…

2 hours ago

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

10 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

15 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

16 hours ago