ಬೀದರ.28.ಫೆಬ್ರುವರಿ.25:-ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಮಾರ್ಚ.5 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.
ಮಾರ್ಚ.5 ರಂದು ಬೆಳಿಗ್ಗೆ 10.30 ಗಂಟೆಗೆ ಬೀದರ ಜಿಲ್ಲೆಯ ಔರಾದ್‍ನ ಅಲೆಮಾರಿ ಕಾಲೋನಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಔರಾದ್‍ನ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡುವರು, ಮಧ್ಯಾಹ್ನ 2 ಗಂಟೆಗೆ ಔರಾದ್‍ನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡುವರು ಹಾಗೂ ಸಂಜೆ 4 ಗಂಟೆಗೆ ಔರಾದ್‍ನ ಮಹಿಳಾ ಹಾಸ್ಟೆಲ್‍ಗೆ ಭೇಟಿ ನೀಡಿ ನಂತರ ಬೀದರಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಮಾರ್ಚ.6 ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಹಾಗೂ ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ (ಎಸ್.ಎಚ್.ಡಬ್ಲ್ಯೂ. ಜಿಲ್ಲೆಯಲ್ಲಿ ಜಾರಿಯಾದ ಬಗ್ಗೆ ಹಾಗೂ ಪ್ರಕರಣಗಳು ದಾಖಲಾದ ಬಗ್ಗೆ, ಅಂಕಿ ಅಂಶಗಳೊಂದಿಗೆ ಚರ್ಚೆ, ಸರ್ಕಾರಿ, ಖಾಸಗಿ, ಸಂಸ್ಥೆಗಳಲ್ಲಿ ಸ್ಥಳೀಯ ಹಾಗೂ ಆಂತರಿಕ ದೂರು ಸಮಿತಿ ಬಗ್ಗೆ ಪರಿಶೀಲನೆ, ಮಹಿಳಾ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚೆ, ಮಹಿಳಾ ರಿಸರ್ವೇಶನ್, ಕಾಲೇಜು ವಿದ್ಯಾರ್ಥಿನಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಜಿಲ್ಲಾಡಳಿತ ತೆಗೆದುಕೊಂಡ ಕ್ರಮದ ಬಗ್ಗ ಚರ್ಚೆ) ಮಹಿಳಾ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 2 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…