Home » ಲೈವ್ ನ್ಯೂಸ್ » ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಇಂದ ಪ್ರವೇಶಾತಿಗೆ ಅರ್ಜಿ ‌ಆಹ್ವಾನ.

ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಇಂದ ಪ್ರವೇಶಾತಿಗೆ ಅರ್ಜಿ ‌ಆಹ್ವಾನ.

Facebook
X
WhatsApp
Telegram

ಮೈಸೂರು.16.ಮಾರ್ಚ್.26: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಬೆಂಗಳೂರು ಪ್ರಾದೇಶಿಕ ಕೇಂದ್ರ-6 (ಸುಂಕದಕಟ್ಟೆ) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ವಿವಿಧ ಶೈಕ್ಷಣಿಕ ಕೋರ್ಸ್‌ಗಳಿಗೆ ಅಂದರೆ, ಪದವಿ ಕೋರ್ಸ್‌ಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಸ್‌.ಡಬ್ಲ್ಯೂ, ಬಿ.ಬಿ.ಎ ಮತ್ತು ಬಿ.ಸಿ.ಎ (ಜನರಲ್ ಮತ್ತು ಐ.ಟಿ)‌ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್‌ಗಳಾದ ಎಂ.ಎ, ಎಂ.ಕಾಂ, ಎಂ.ಎಸ್ಸಿ, ಎಂ.ಎಸ್‌.ಡಬ್ಲ್ಯೂ, ಎಂ.ಸಿ.ಎ ಮತ್ತು ಎಂ.ಬಿ.ಎ ಸೇರಿದಂತೆ ಇತರೆ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ https://www.ksoumysuru.ac.in ನಲ್ಲಿ ಲಭ್ಯವಿರುವ ಪ್ರವೇಶಾತಿ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಶುಲ್ಕ ರಿಯಾಯಿತಿ ಮತ್ತು ಸೌಲಭ್ಯಗಳು:
ವಿಶ್ವವಿದ್ಯಾನಿಲಯವು ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷ ಶುಲ್ಕ ರಿಯಾಯಿತಿಗಳನ್ನು ಘೋಷಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳು, ಸೈನಿಕರು, ಮಾಜಿ ಸೈನಿಕರು, ಆಟೋ/ಕ್ಯಾಬ್ ಚಾಲಕರ ಮಕ್ಕಳು ಹಾಗೂ ಕೆ.ಎಸ್.ಆರ್.ಟಿ.ಸಿ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಶೇ. 10 ರಷ್ಟು ಬೋಧನಾ ಶುಲ್ಕ ರಿಯಾಯಿತಿ ಲಭ್ಯವಿದೆ.

ಕೋವಿಡ್‌ನಿಂದ ಮೃತಪಟ್ಟ ಪೋಷಕರ ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರು ಹಾಗೂ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು.

ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸಲ್ಲಿಸಿ SSP (State Scholarship Portal) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9632332265, 9741197921, 9380554929 ಕರೆ ಮಾಡಿ ಅಥವಾ ಇಮೇಲ್ ವಿಳಾಸ ksoubengalururc06@gmail.comಗೆ ಸಂಪರ್ಕಿಸಬಹುದು ಎಂದು ಕರಾಮುವಿಯ ಬೆಂಗಳೂರು ಪ್ರಾದೇಶಿಕ ಕೇಂದ್ರ-6ರ ಪ್ರಾದೇಶಿಕ ನಿರ್ದೇಶಕಿ ಶಶಿಕಲಾ ಜೆ ಅವರು‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology