ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ:


ರೈತಬಾಂಧವರಿಂದ ತಾಳೆಯಾಗದೆ ಇರುವ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ್.


ಬೀದರ.05.ಮಾರ್ಚ.25: – ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾಯೋಜನೆ (ಏಖS-Pಒಈಃಙ) ಅಡಿಯ 2023-24 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ರೈತರ ಬೆಳೆ ವಿಮೆಗೆ ನೊಂದಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ಸರ್ಕಾರದಿಂದ ಅನುಮೋದನೆಯಾದ ವಿನಾಯಿತಿಗಳನ್ನು ಅಳವಡಿಸಿ ತಾಳೆ ಆಗಿರುವ ಪ್ರಸ್ತಾವನೆಗಳಿಗೆ ಸಂರಕ್ಷಣೆ ತಂತ್ರಾಂಶದಲ್ಲಿ ವಿಮಾ ಪರಿಹಾರ ಲೆಕ್ಕ ಹಾಕಲಾಗಿದೆ.

ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂರಕ್ಷಣೆ ತಂತ್ರಾಶದಲ್ಲಿ ಪರಿಶೀಲಿಸಲಾಗಿ ಮುಂಗಾರು ಹಂಗಾಮಿನಲ್ಲಿ ತಿರಸ್ಕ್ರತಗೊಂಡ ಜಿಲ್ಲೆಯ ಒಟ್ಟು 8106, ಹಿಂಗಾರು ಹಂಗಾಮಿನಲ್ಲಿ ತಿರಸ್ಕ್ರತಗೊಂಡ 947  ಪ್ರಸ್ತಾವನೆಗಳ ರೈತರ ಪಟ್ಟಿಯನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಗ್ರಾಮ ಪಂಚಾಯತಗಳಲ್ಲಿ  ಪ್ರದರ್ಶಿಸಲಾಗುವುದು,
ಕಾರಣ ಸಂಬಂಧಪಟ್ಟ ರೈತರು ಆಕ್ಷೇಪಣೆ ಇದ್ದಲ್ಲಿ ಮಾತ್ರ ಮಾಹಿತಿಯನ್ನು ಪ್ರಕಟಿಸಿದ ದಿನಾಂಕದಿಂದ 10 ದಿನಗಳ ಒಳಗಾಗಿ ತಮ್ಮ ಮನವಿಯನ್ನು ಸಲ್ಲಿಸಲು ಹಾಗೂ ಮರುಪರಿಶೀಲಿಸಲು, ಸದರಿ ಮನವಿಯೊಂದಿಗೆ ಬೆಳೆ ವಿಮೆಗೆ ನೊಂದಣಿಯಾಗಿರುವ ಬೆಳೆಯನ್ನು ಬೆಳೆದಿರುವ ಕುರಿತು ಅಗತ್ಯ ದಾಖಲಾತಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ 2023-24ರ ಪಹಣಿ ಪತ್ರಿಕೆಯಲ್ಲಿ (ಖಖಿಅ) ವಿಮೆಗೆ ನೊಂದಾಯಿಸಿದ ಬೆಳೆ ನಮೂದಾಗಿರಬೇಕು, ಬೆಂಬಲ ಬೆಲೆ ಪ್ರಯೋಜನ ಪಡೆದಿದಲ್ಲಿ, ರಶೀದಿ ಸಲ್ಲಿಸುವುದು ಹಾಗೂ ವಿಮೆಗೆ ನೋಂದಾಯಿತ ಬೆಳೆಯ ಉತ್ಪನ್ನವನ್ನು ಂPಒಅ ಮಾರುಕಟ್ಟೆಗೆ ಮಾರಾಟ ಮಾಡಿದ್ದಲ್ಲಿ ಸದರಿ ದಾಖಲೆ ಸಲ್ಲಿಸಬೇಕು.


ತಾಲ್ಲೂಕುವಾರು ವಿವರಗಳು,

ಬೀದರ ಮುಂಗಾರು 540, ಹಿಂಗಾರು 31; ಔರಾದ ಮುಂಗಾರು 1741, ಹಿಂಗಾರು 156;ಬಸವಕಲ್ಯಾಣಮುಂಗಾರು 437, ಹಿಂಗಾರು 75;ಹುಮನಾಬಾದ ಮುಂಗಾರು 567, ಹಿಂಗಾರು 6;ಹುಲಸೂರು ಮುಂಗಾರು 518, ಹಿಂಗಾರು 30;ಕಮಲನಗರ ಮುಂಗಾರು 920, ಹಿಂಗಾರು 461; ಚಿಟಗುಪ್ಪಾ ಮುಂಗಾರು 880, ಹಿಂಗಾರು 0 ಇದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

1 hour ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

1 hour ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

2 hours ago

ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!

2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್  ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…

11 hours ago

ಹಂದ್ರಾಳ ಗ್ರಾಮದಲ್ಲಿ ಹೆಸರು ಬೆಳೆಯ ಕ್ಷೇತೋತ್ಸವ

ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…

11 hours ago

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 6,589 ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…

11 hours ago