ಬೀದರ.22.ಜೂನ್.25:- 2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ತಿಕ ಭದ್ರತೆ ಒದಗಿಸುವ ದೃಷ್ಟಿಯಿಂದ ವಿಮೆ ಯೋಜನೆ ಜಾರಿಗೆ ತರಲಾಗಿದೆ ಎಂದು ಬೀದರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ತಾಲ್ಲೂಕಿನ ಮುಂಗಾರು ಹಂಗಾಮಿನಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿತೊಗರಿ(ಮ.ಆ)ಹಾಗೂ ಸೋಯಾಅವರೆ (ನೀ&ಮ.ಆ)ಬೆಳೆಗಳು ಮತ್ತು ಇತರೆ ಬೆಳೆಗಳಾದ ಹೆಸರು (ಮ.ಆ), ಉದ್ದು (ಮ.ಆ), ಮುಸುಕಿನ ಜೋಳ (ಮ.ಆ), ಜೋಳ (ಮ.ಆ), ಎಳ್ಳು (ಮ.ಆ),ಭತ್ತ (ನೀ&ಮ.ಆ),ಹತ್ತಿ (ಮ.ಆ) ಬೆಳೆಗಳನ್ನು ನಿಗದಿಪಡಿಸಲಾಗಿದ್ದು, “ಯೂನಿವರ್ಸಲ್ ಸೋಂಪೊ ಜನರಲ್ ಇನ್‍ಶ್ಯೂರೆನ್ಸ್ ಕಂಪನಿ ಲಿಮಿಟೆಡ್” ವಿಮಾ ಸಂಸ್ಥೆಯನ್ನು ಅನುಷ್ಠಾನ ಸಂಸ್ಥೆಯನ್ನಾಗಿ ನಿಗದಿಪಡಿಸಲಾಗಿದೆ.
ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕ: 31-07-2025 ಆಗಿರುತ್ತದೆ. ಸೂರ್ಯಕಾಂತಿ ಮಳೆಯಾಶ್ರಿತ ಬೆಳೆಗೆ ಅಗಸ್ಟ-16-2025 ಕೊನೆಯ ದಿನಾಂಕ ಆಗಿರುತ್ತದೆ.
ಬೆಳೆ ವಿಮೆ ನೋಂದಣಿಗಾಗಿ ರೈತರು FRUITS ತಂತ್ರಾಂಶದಲ್ಲಿಕಡ್ಡಾಯವಾಗಿ ನೊಂದಣಿ ಮಾಡಿಕೊಂಡಿರಬೇಕು ಹಾಗೂ FRUITS ID ಪಡೆದುಕೊಂಡಿರಬೇಕು. FRUITS ತಂತ್ರಾಂಶದಲ್ಲಿ ದಾಖಲಾದ ಸರ್ವೇ ನಂಬರ್‍ಗಳಿಗೆ ಮಾತ್ರ ಬೆಳೆ ವಿಮೆ ನೊಂದಣಿ ಮಾಡಲು ಅವಕಾಶವಿರುತ್ತದೆ. ಜಂಟಿ ಖಾತೆದಾರರು FRUITS ತಂತ್ರಾಂಶದಲ್ಲಿ ದಾಖಲಾದ ವಿಸ್ತೀರ್ಣಕ್ಕನುಗುಣವಾಗಿ ಬೆಳೆ ವಿಮೆ ನೊಂದಣಿ ಮಾಡಲು ಅವಕಾಶವಿರುತ್ತದೆ.
FRUITS ID ದಾಖಲಿಸಲು ಅಥವಾ ಯಾವದೇ ಮಾರ್ಪಾಡಿಗಾಗಿತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಬೇಕು. ಬೆಳೆವಾರು ನಿಗದಿಪಡಿಸಿರುವ ಅಂತಿಮ ದಿನಾಂಕದೊಳಗಾಗಿ ತಾಲೂಕಿನಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬೇಕು.
ರೈತರು ನೊಂದಣಿಗಾಗಿ ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ ಜೊತೆಗೆ ಆಧಾರ ಕಾರ್ಡ ಮತ್ತು ಆಧಾರ ಸಂಖ್ಯೆ ಜೊಡಿಸಿದ ಬ್ಯಾಂಕ್ ಖಾತೆ/ಪಾಸ್ ಪುಸ್ತಕದೊಂದಿಗೆಡಿ. ಸಿ.ಸಿ/ಇತರೆ ಬ್ಯಾಂಕ್, ಗ್ರಾಮ-ಒನ್, ಕರ್ನಾಟಕಒನ್‍ಮತ್ತು ಸಿ.ಎಸ್.ಸಿ ಕೇಂದ್ರಗಳಿಗೆ ಸಂಪರ್ಕಿಸಬೆಕು.ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…