ಬೀದರ.24.ಜುಲೈ.25:- ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮಾ ಯೋಜನೆ ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ಭಾಗವಹಿಸಿ ಲಾಭ ಪಡೆಯಬಹುದಾಗಿದೆ ಎಂದು ಬೀದರ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26 ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುಮೋದನೆಯನ್ನು ನೀಡಲಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತಿ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತೊಗರಿ (ಮಳೆಯಾಶ್ರಿತ(ಮ.ಆ)) ಹಾಗೂ ಸೋಯಾಅವರೆ (ಮ.ಆ) ಬೆಳೆಗಳು ಮತ್ತು ಇತರೆ ಬೆಳೆಗಳಾದ ಹೆಸರು (ಮ.ಆ), ಸೂರ್ಯಕಾಂತಿ (ಮ.ಆ), ಉದ್ದು (ಮ.ಆ), ಮುಸುಕಿನ ಜೋಳ (ಮ.ಆ), ಶೇಂಗಾ (ಮ.ಆ), ಜೋಳ (ಮ.ಆ), ಎಳ್ಳು (ಮ.ಆ), ಸಜ್ಜೆ (ಮ.ಆ), ಸೋಯಾಅವರೆ (ನೀರಾವರಿ(ನೀ)), ಭತ್ತ (ನೀ & ಮ.ಆ), ಹತ್ತಿ (ಮ.ಆ) ಬೆಳೆಗಳನ್ನು ವಿವಿಧ ತಾಲ್ಲೂಕಿಗೆ ನಿಗದಿಪಡಿಸಿ, ಹೋಬಳಿ ಮಟ್ಟಕ್ಕೆ ಅನುಷ್ಠಾನಗೊಳಿಸಲು “ಯೂನಿವರ್ಸಲ್ ಸೋಂಪೊ ಜನರಲ್ ಇನ್‍ಶ್ಯೂರೆನ್ಸ್ ಕಂಪನಿ ಲಿಮಿಟೆಡ್” ವಿಮಾ ಸಂಸ್ಥೆಯನ್ನು ನಿಗದಿಪಡಿಸಲಾಗಿದೆ.
ಈ ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕ: 31-07-2025 ಹಾಗೂ ಸೂರ್ಯಕಾಂತಿ (ಮ.ಆ) ಬೆಳೆಗೆ ದಿನಾಂಕ: 16-08-2025 ಆಗಿರುತ್ತದೆ.
ಬೆಳೆಸಾಲ ಪಡೆದ ರೈತರಿಗಾಗಿ ಆಪ್ಟಿಂಗ-ಔಟ ಮತ್ತು ಆಪ್ಟಿಂಗ-ಇನ್ ಎಂಬ ಅವಕಾಶವನ್ನು ರೈತರಿಗೆ ನೀಡಲಾಗಿದೆ. ಇದರಲ್ಲಿ ಬೆಳೆಸಾಲ ಪಡೆದ ರೈತರು ಬೆಳೆವಿಮೆ ಮಾಡಿಸುವುದು ಕಡ್ಡಾಯವಾಗಿರುವುದಿಲ್ಲ. ಬೆಳೆವಿಮೆ ಮಾಡಲು ಇಚ್ಛಿಸದ ಸಾಲ ಪಡೆದಂತಹ ರೈತರು ಬೆಳೆವಿಮೆ ಮಾಡಿಸಲು ನಿಗಧಿಪಡಿಸಿರುವ ಅಂತಿಮ ದಿನಾಂಕಕ್ಕಿಂತ 7 ದಿನದ ಮುಂಚಿತವಾಗಿ ಸಂಬಂಧಪಟ್ಟ ಬ್ಯಾಂಕಿಗೆ ಆಪ್ಟಿಂಗ-ಔಟ ಎಂಬ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಸದರಿ ಅರ್ಜಿ ನೀಡಿದ ರೈತರನ್ನು ವಿಮೆ ಯೋಜನೆಯಿಂದ ಬ್ಯಾಂಕ್‍ನವರು ಹೊರಗಿಡಬೇಕಾಗುತ್ತದೆ. ಸಾಲ ಪಡೆದಿರುವ ರೈತರ ಪೈಕಿ ಆಪ್ಟಿಂಗ-ಔಟ ನಮೂನೆ ನೀಡದ ಉಳಿದ ಎಲ್ಲಾ ರೈತರನ್ನು ವಿಮಾ ಯೋಜನೆಯಡಿ ತರುವುದು ಕಡ್ಡಾಯವಾಗಿರುತ್ತದೆ.
ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ, ಆಧಾರ ಸಂಖ್ಯೆ ಜೊಡಿಸಿದ ಬ್ಯಾಂಕ್ ಖಾತೆ ವಿವರ ಮತ್ತು ಆಧಾರ ಕಾರ್ಡ್‍ನ ಪ್ರತಿಯನ್ನು ಸಂಬಂಧಿಸಿದ ಬ್ಯಾಂಕ ಅಥವಾ ಸಿ.ಎಸ್.ಸಿ ಕೇಂದ್ರಗಳಿಗೆ ಒದಗಿಸಿ ನೋಂದಣಿ ಮಾಡಿಸಬಹುದು. ರೈತರು ನೋಂದಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ವಾಣಿಜ್ಯ/ಗ್ರಾಮೀಣ/ಸಹಕಾರಿ/ಬ್ಯಾಂಕುಗಳನ್ನು/sಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ಮಾಹಿತಿ ಹಕ್ಕು ಅಧಿನಿಯಮ 2005 ಸಂಬಂಧಿಸಿತ್ ಇಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಜಿಲ್ಲಾ…
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…