ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆ ಬೀದರ:ನಾಳೆ ಸಾರ್ವಜನಿಕ ಅಹವಾಲು ಕುಂದು ಕೊರತೆ ಸಭೆ.!


ಬೀದರ.20.ಜನವರಿ.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಬೀದರ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜನವರಿ.22 ರಂದು ಬೆಳಿಗ್ಗೆ 11.30 ಗಂಟೆಗೆ ಔರಾದ (ಬಾ) ತಾಲ್ಲೂಕಾ ಪಂಚಾಯತ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಕುಂದು ಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ: 1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ,  ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ, ಸದರಿ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಎಸ್‍ಪಿ ಮೊ.ಸಂ-9364062519, ಡಿಎಸ್‍ಪಿ ಮೊಬೈಲ ಸಂ-9364062571, ಪಿಐ-1 ಮೊಬೈಲ ಸಂ-9364062672, ಪಿಐ-2 ಮೊ.ಸಂ-9364062673, ಪಿಐ-3 ಮೊ.ಸಂ-9364062674 ಹಾಗೂ ಪಿಐ-4 ಮೊ.ಸಂ-9364062675 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

2 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

3 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

3 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

4 hours ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

4 hours ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

5 hours ago