ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷನಿಕ ನೇರವಸಾಲ ಯೋಜನೆ (ಹೊಸದು/ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರö್ಯ ಅಮೃತ ಮುನ್ನಡೆ ಯೋಜನೆಗಳಡಿ ಸಹಾಯಧನ/ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಕೇಂದ್ರಗಳಲ್ಲಿ ಅನ್‌ಲೈನ್ ಮೂಲಕ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ವೆಬ್‌ಸೈಟ್ https://www.kaushalkar.com/ ನಲ್ಲಿ ಅರ್ಜಿಗಳನ್ನು ದಿನಾಂಕ: 02-07-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in. ದಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848/7899899039 ಯಿಂದ ಪಡೆಯಬಹುದಾಗಿದೆ.
ಹಾಗೂ ಜಿಲ್ಲೆಗಳಲ್ಲಿ ನಿಗಮದ ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ-585403 ದೂರವಾಣಿ ಸಂ:08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.