ಕಲಬುರಗಿ | ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕಲಬುರಗಿ.12.ಜೂನ್.25:- ರಾಜ್ಯದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರುಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ (01) ರ ಸರ್ಕಾರದ ಆದೇಶದಲ್ಲಿ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ. ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು ಹಾಗೂ ಹೊಸ ಸಂಯೋಜನೆಗಳಿಗೆ ಹುದ್ದೆ ಮಂಜೂರಾಗದ ವಿಷಯಗಳಿಗೆ ನೇಮಕ ಮಾಡಿಕೊಳ್ಳಬೇಕಾದ ಅತಿಥಿ ಉಪನ್ಯಾಸಕರು ಒಟ್ಟು 4689 ಉಪನ್ಯಾಸಕರ ಹುದ್ದೆಗಳಿಗೆ ಮಾಸಿಕ ರೂ. 14,000/- (ಹದಿನಾಲ್ಕು ಸಾವಿರ ಮಾತ್ರ) ರಂತೆ ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದ್ದು, ಮಾರ್ಚ್-2026 ಅಂತ್ಯದವರೆಗೂ ಖಾಲಿಯಾಗುವ ಹುದ್ದೆಗಳಿಗೆ, ಕಾರ್ಯಭಾರ ಕಡಿಮೆ ಇರುವ ವಿವಿಧ ವಿಷಯಗಳ ಉಪನ್ಯಾಸಕರುಗಳನ್ನು ಸರಿದೂಗಿಸಿದ ನಂತರ ಲಭ್ಯವಾಗುವ ಹುದ್ದೆಗಳಿಗೆ

ಕಲಬುರಗಿ ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ 38 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ 99 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ 7 ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 28 ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು (ಪ್ರಾಂಶುಪಾಲರ ಹಂತದಲ್ಲಿ) ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮೇ 25ರ ರಾಜ್ಯ ಸರ್ಕಾರದ ಆದೇಶದನ್ವಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದ್ದು, ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ 2025ರ ಜೂ.16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರು ಆಯ್ಕೆ ಮಾಡಿದ ಉಪನ್ಯಾಸಕರ ವಿಷಯವಾರು ಪಟ್ಟಿಯನ್ನು ಸಲ್ಲಿಸಲು ಜೂ.17 ಕೊನೆಯ ದಿನವಾಗಿದೆ. 3

ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ/ಇಲಾಖೆಯ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಜಿಲ್ಲೆಯ ಕಾಲೇಜುವಾರು ಖಾಲಿಯಿರುವ ವಿಷಯವಾರು ಶಿಕ್ಷಕರ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿವಿಧಾನ ಸೌಧ ಆವರಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

12 minutes ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

1 hour ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

2 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

2 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

8 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

13 hours ago