ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಕ್ಕಳ ಸಹಾಯವಾಣಿ-1098/112, ಅಪ್ಪಾ ಪಬ್ಲಿಕ್ ಶಾಲೆ, ವಿವಿಧ ಇಲಾಖೆಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳು ಇವುಗಳ ಸಂಯುಕ್ತಾಶ್ರಯದಲ್ಲಿ ಜೂ.12 ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ” ಕಾರ್ಯಕ್ರಮವನ್ನು ಕಲಬುರಗಿ ನಗರದ ಗೋವಾ ಹೊಟೇಲ್ ಹತ್ತಿರದ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಕಲಬುರಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷೆ ಬಿ.ಫೌಝಿಯಾ ತರನ್ನುಮ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅತ್ತೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಸಿಂಧೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಶ್ವರಾಧ್ಯ ಇಜೇರಿ, ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಕಲಬುರಗಿ ಪ್ರಾದೇಶಿಕ ಉಪಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಎ.ಶಿಂಧಿಹಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…