ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:

*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:*
*ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬೀದರ.04.ಜುಲೈ.25:- ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ ದಿನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಕಾರಣದಿಂದಲೂ ನೇಮಕಾತಿಗಳು ವಿಳಂಭವಾಗದಂತೆ ನೋಡಿಕೊಳ್ಳಬೇಕು ಎಂದರು.


ನೇಮಕಾತಿ ವೇಳೆ ಸಮಸ್ಯೆಗಳು ಕಂಡು ಬಂದಲ್ಲಿ, ತಕ್ಷಣವೇ ಪರಿಹರಿಸಬೇಕು. ನಮ್ಮ ಇಲಾಖೆ ಜನರಿಗೆ, ಜನರ ಬದುಕಿಗೆ ಹತ್ತಿರವಾದ ಇಲಾಖೆ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ಮಾಡದೆ, ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದರು.


ಕೇಂದ್ರ ಹಾಗೂ ರಾಜ್ಯದಿಂದ ಕಾಲಕಾಲಕ್ಕೆ ನೀಡಲಾಗುವ ಗುರಿಯನ್ನು ತಲುಪಲೇಬೇಕು. ಅನೇಕ ಕಡೆ ಮಕ್ಕಳಿಗೆ ಸರಿಯಾಗಿ ಮೊಟ್ಟೆ ತಲುಪುತ್ತಿಲ್ಲ. ಹಾಲಿನ ಪೌಡರ್ ಮಾರಿಕೊಳ್ಳುತ್ತಾರೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಅದು ನಿಜವಾಗಿದ್ದಲ್ಲಿ ಅಂಥವುಗಳಲ್ಲಿ ಎಂದಿಗೂ ಸಹಿಸಿಕೊಳ್ಳುವುದಿಲ್ಲ. ತಪ್ಪಿತಸ್ಥ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಸಿದರು.


ಪ್ರತಿ ಅಧಿಕಾರಿಗಳು, ಸ್ಥಳೀಯ ಸಚಿವರು ಹಾಗೂ ಶಾಸಕರಿಗೆ ಇಲಾಖೆ ಕಾರ್ಯಕ್ರಮ ಮತ್ತು ಪ್ರಗತಿಯ ವಿವರಗಳನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ನೀಡಬೇಕು ಎಂದು ಸಚಿವರು ಆದೇಶಿಸಿದರು.


ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ನಮ್ಮ ಸರ್ಕಾರದ ಬಹಳ ಕ್ರಿಯಾಶೀಲ ಸಚಿವರು, ಮಹಿಳೆಯರು, ಮಕ್ಕಳು, ವಿಕಲಚೇತರು ಹಾಗೂ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿವಹಿಸಿ ಕೆಲಸ ಮಾಡುತ್ತಿದ್ದಾರೆ. ಸದಾ ಹೆಚ್ಚಿನ ಅನುದಾನಕ್ಕಾಗಿ ಪ್ರಯತ್ನಿಸುತ್ತಲೇ ಇರುತ್ತಾರೆ. ಜವಾಬ್ದಾರಿಯುತವಾಗಿ ಇಲಾಖೆಯನ್ನು ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.
ಜಿಲ್ಲೆಯಲ್ಲಿ ಇಲಾಖೆಯಿಂದ ಆಗಬೇಕಿರುವ ಕೆಲಸ ಕಾರ್ಯಗಳ ಕುರಿತು ಅವರು ಸಭೆಯಲ್ಲಿ ಗಮನಸೆಳೆದರು. ಸಭೆ ಆರಂಭಕ್ಕೂ ಮುನ್ನ ಸಚಿವ ಈಶ್ವರ್ ಖಂಡ್ರೆ ಅವರು ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿದರು.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಒಳಗೊಂಡ ಕಲಬುರಗಿ ವಿಭಾಗದ ಮಟ್ಟದಲ್ಲಿ ಐ.ಸಿ.ಡಿ.ಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಶನಿವಾರವೂ ಸಭೆ ಮುಂದುವರಿಯಲಿದೆ.


ಈ ಸಭೆಯಲ್ಲಿ ಪೌರಾಡಳಿತ ಮತ್ತು ಹಜ್ ಖಾತೆ ಸಚಿವ ರಹೀಂ ಖಾನ್, ಇಲಾಖೆಯ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪ್ರದೀಪ್ ಗುಂಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕ ರಾಘವೇಂದ್ರ, ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಸೇರಿದಂತೆ ಇಲಾಖೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

prajaprabhat

Recent Posts

ಸಹಾಯಕ ಪ್ರಾಧ್ಯಾಪಕ’ರಿಗೆ ಕನಿಷ್ಠ ಅರ್ಹತೆ NET/SLET/SET OR Ph.D ಕಡ್ಡಾಯ ? UGC Rules 2025

ಭಾರತದಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು, ಸಾಮಾನ್ಯವಾಗಿ, ಅಭ್ಯರ್ಥಿಗಳು UGC NET ಪರೀಕ್ಷೆಗೆ ಅರ್ಹತೆ ಪಡೆಯಬೇಕು ಮತ್ತು ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ…

6 hours ago

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ…

6 hours ago

ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ…

9 hours ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

9 hours ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

11 hours ago

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹುಲಿಗಿ ಹತ್ತಿರದ ಹಳೇ ನಿಂಗಾಪುರ ಗ್ರಾಮದ ಪಾಂಡುರAಗ ದೇವಸ್ಥಾನದ ಹತ್ತಿರದ ತುಂಗಭದ್ರಾ ಎಡದಂಡೆ ಕೆನಾಲ್‌ನಲ್ಲಿ ಸುಮಾರು 30…

11 hours ago