ಬೆಂಗಳೂರು.21.ಆಗಸ್ಟ್.25:- ಕಲ್ಯಾಣ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 385 ಶಿಕ್ಷಕರ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಖಾಲಿ ಇರುವ ಸರ್ಕಾರಿ ಪ್ರೌಢಶಾಲೆಗಳ 385 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.