ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಿದ್ದರಾಮಯ್ಯ

ಯಾದಗಿರಿ.14.ಜೂನ್‌.25:- ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5300 ಕೋಟಿ ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ. KKRDB ಗೆ ಕೊಡುವ ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ ಎಂದರು.

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ:

ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ ಎಂದರು.

ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು ಎಂದು ವಿವರಿಸಿದರು.

ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಮ್ ಸಿಂಗ್ ಅವರ ಶ್ರಮ‌ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಶ್ಲಾಘಿಸಿದರು.

ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲಭೂತ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು 440.63 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಪುಕ್ಕಟೆಯಾಗಿ ಜಗ ಕೊಟ್ಟಿದ್ಸೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು ಎಂದು ಸಿಎಂ ಸೂಚನೆ ನೀಡಿದರು.

42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ಕೊಡಲು ಸರ್ಕಾರ ಯೋಜನೆ ರೂಪಿಸಿದೆ ಎಂದರು. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲಾ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ ಎಂದರು.

ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ. ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವ್ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ನಾವು ಬಸವಣ್ಣನವರ ಆಶಯದಂತೆ ನುಡಿದಂತೆ ನಡೆಯುವರು. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು ಸೇರಿ 200 ಭರವಸೆಗಳು ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಸಾಧಿಸಿ ತೋರಿಸುತ್ತೇವೆ ಎಂದರು. ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿರುವುದು ಆರ್ಥಿಕವಾಗಿ ರಾಜ್ಯ ಪ್ರಗತಿ ಪಥದಲ್ಲಿರುವುದಕ್ಕೆ ಸಾಕ್ಷಿ . ಕಲ್ಯಾಣ ಕರ್ನಾಟಕದ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

prajaprabhat

Recent Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ : 2025-26ನೇ ಸಾಲಿನ ‘NMMSS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26 ನೇ ಶೈಕ್ಷಣಿಕ ಸಾಲಿಗೆ NMMS ವಿದ್ಯಾರ್ಥಿ ವೇತನಕ್ಕಾಗಿ, ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (NSP)…

24 minutes ago

ಸರಕಾರಿ ಪದವಿ ಕಾಲೇಜುಗು ಈಗ ಖಾಸಗಿ ಕಾಲೇಜುಗಳಂತೆ : ಡಾ.ಎಂ.ಸಿ.ಸುಧಾಕರ್

ಚಿಕ್ಕಮಗಳೂರು.15.ಜೂನ್.25:- ರಾಜ್ಯ ಸರಕಾರ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಖಾಸಗಿ ಕಾಲೇಜುಗಳಂತೆ…

51 minutes ago

ಜೂ.16 ರಂದು ಎನ್‌ಎಬಿಎಲ್ ಮಾನ್ಯತೆ,<br>ಅದರ ಲಾಭಗಳು ಕುರಿತು ಜಾಗೃತಿ ಕಾರ್ಯಕ್ರಮ

ಬೀದರ.14.ಜೂನ್.25:- ಬೀದರ ತೋಟಗಾರಿಕೆ ಮಹಾವಿದ್ಯಾಲಯ, ರಿವರ್ಡ ಯೋಜನೆ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ಬೀದರ, ರಾಷ್ಟ್ರೀಯ ಪರೀಕ್ಷೆ ಮತ್ತು ಅಂಶಶೋಧನಾ ಪ್ರಯೋಗಾಲಯಗಳ…

8 hours ago

ಜೂ.15 ರಿಂದ 17 ರವರೆಗೆ ವಿವಿಧ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.14.ಜೂನ್.25:-ದಿನಾಂಕ: 15-06-2025 ರಿಂದ 17-06-2025 ರವರೆಗೆ ಸಿ.ಆರ್.ಪಿ/ಬಿ.ಆರ್.ಪಿ/ಇ.ಸಿ.ಓ/ತಾಂತ್ರಿಕ ಸಹಾಯಕರು ಪ್ರಾಥಮಿಕ ಮತ್ತು ಪ್ರೌಢ ವಿಭಾಗಗಳಿಗೆ ಹಾಗೂ ಗ್ರೂಪ್-ಬಿ ವೃಂದದ ಸಮನಾಂತರ…

9 hours ago

UGC NET 2025 ಪರೀಕ್ಷಾ ಪ್ರವೇಶ ಪತ್ರ  ಡೌನ್‌ಲೋಡ್ ಬಗ್ಗೆ ಮಾಹಿತಿ..

ಹೊಸ ದೆಹಲಿ.14.ಜೂನ್.25:- UGC NET 2025 ಪರೀಕ್ಷೆಯನ್ನು ಜೂನ್ 25 ರಿಂದ ಜೂನ್ 29, 2025 ರವರೆಗೆ ದೇಶಾದ್ಯಂತ ವಿವಿಧ…

12 hours ago

ಜೂನ್. 16 ರಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ. ಜೂನ್. 14.( ಕರ್ನಾಟಕ ವಾರ್ತೆ):- ಕಾನೂನು. ನ್ಯಾಯ. ಮಾನವ ಹಕ್ಕುಗಳು. ಸಂಸದೀಯ ವ್ಯವಹಾರ. ಶಾಸನ ರಚನೆ ಹಾಗೂ ಪ್ರವಾಸೋದ್ಯಮ…

12 hours ago