ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ
ಕಲಬುರಗಿ.17.ಸೆಪ್ಟೆಂಬರ.25:- ಕಲಬುರಗಿ: ಹಿಂದೆ ಘೋಷಿಸಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚನೆಗೆ ಸಂಪುಟ ಅನುಮೋದನೆ ನೀಡಿದ್ದು, ಮುಂದಿನ ವಾರದೊಳಗೆ ಈ ಸಚಿವಾಲಯದ ಹುದ್ದೆಗಳು ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹೈದರಾಬಾದ್ ನಿಝಾಮರ ಆಡಳಿತದಿಂದ ಮುಕ್ತಿ ಪಡೆದು ಭಾರತಕ್ಕೆ ಸೇರ್ಪಡೆಯಾದ ಪ್ರಯುಕ್ತ ಡಿ.ಎ.ಆರ್. ಮೈದಾನದಲ್ಲಿ ಬುಧವಾರ ಬೆಳಗ್ಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಕಲ್ಯಾಣ ಕರ್ನಾಟಕಕ್ಕೆ ಈವರೆಗೆ ಯಾರೂ ಕೊಡದ ಮಹತ್ವ ನಮ್ಮ ಸರಕಾರ ಕೊಡುತ್ತಿದೆ. ಈ ಭಾಗದ ಸರ್ವತೋಮುಖ ಅಭಿವೃದ್ಧಿಗಾಗಿ ಕಲಬುರಗಿಯಲ್ಲೇ ಸಚಿವಾಲಯ ಸ್ಥಾಪನೆಗೆ ಸಂಪುಟ ಒಪ್ಪಿದೆ ನೀಡಿದೆ ಎಂಕಾರ್ಯಕ್ರಮದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಡಿ. ಸುಧಾಕರ್, ಭೈರತಿ ಸುರೇಶ್, ಕೆಕೆಆರ್ ಡಿಬಿ ಅಧ್ಯಕ್ಷ ಜೇವರ್ಗಿ ಶಾಸಕ ಡಾ.ಅಜಯ ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತಶಶೀಲ್ ನಮೋಶಿ, ತಿಪ್ಪಣ್ಣಪ್ಪ ಕಮಕನೂರ್, ಜಗದೇವ ಗುತ್ತೇದಾರ್, ಬಿ.ಜಿ ಪಾಟೀಲ್ ಸೇರಿದಂತೆ ಇತರ ಗಣ್ಯರು ಇದ್ದರು.

