ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ 200 KPS ಶಾಲೆಗಳ : ಡಾ.ಅಜಯ್ ಸಿಂಗ ಕೆಕೆಆರ್‌ಡಿಬಿ ಅಧ್ಯಕ್ಷರು

ಕಲಬುರಗಿ.09.ಫೆ.25:-ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಕೊಡಲು 200 ಕೆಪಿಎಸ್ ಮಾದರಿಯ ಕರ್ನಾಟಕ ಪಬ್ಲಿಕ್ ಶಾಲೆ KPS ಸ್ಥಾಪನೆಗೆ ಚಿಂತನೆ ನಡೆದಿದೆ. 

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ”ಈ ಬಾರಿ ₹ 4500 ಕೋಟಿ ಅನುದಾನದ ಕ್ರಿಯಾ ಯೋಜನೆ ತಯಾರಿಸಿದ್ದು, ಒಂದು ತಿಂಗಳಲ್ಲಿ ಎಸ್‌ಸಿಪಿ-ಟಿಎಸ್‌ಪಿ ಮೀಸಲು ಅನುದಾನದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಹೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ “ಕೆಕೆಆರ್‌ಡಿಬಿ” ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಡುಗಡೆಯಾದ ಅನುದಾನ ಖರ್ಚೇ ಆಗುವುದಿಲ್ಲ ಎಂಬ ಆಪಾದನೆ ಇತ್ತು. ಸಿಬ್ಬಂದಿ ಕೊರತೆಯ ನಡುವೆಯೂ ಬೇರೆ- ಬೇರೆ ಇಲಾಖೆಗಳ ನೆರವು ಪಡೆದ ಕ್ರಿಯಾ ಯೋಜನೆಗಳನ್ನು ತಯಾರಿಸಿದ್ದೇವೆ.

ಮುಂಬರುವ ಬಜೆಟ್‌ನಲ್ಲಿ ಘೋಷಣೆಯಾಗಲಿದೆ. ಸಿಎಸ್‌ಆರ್ ನಿಧಿ ಬಳಸಿಕೊಂಡು ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕೈದು ಕೆಪಿಎಸ್‌ ಶಾಲೆಗಳನ್ನು ತಲಾ ₹ 5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

‘ಮುಂದಿನ ವರ್ಷವೂ ಅಕ್ಷರ ಆವಿಷ್ಕಾರ ಕಾರ್ಯಕ್ರಮಗಳು ಮುಂದುವರೆಯಲಿದ್ದು, ಮಾರ್ಚ್ ಬಳಿಕ ನಡೆಯುವ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು.

ಈ ಭಾಗದ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ತಜ್ಞರ ಸಮಿತಿ ರಚಿಸುವ ಚಿಂತನೆ ಇದೆ’ ಎಂದು ಮಾಹಿತಿ ನೀಡಿದರು.

ಕಲಬುರಗಿಯಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಮಂಡಳಿಯ ₹ 857 ಕೋಟಿ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿತ್ತು. ಅದರಲ್ಲಿ ₹ 439 ಕೋಟಿ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ನಗರ ಆರೋಗ್ಯ ಉಪ ಕೇಂದ್ರಗಳ ನಿರ್ಮಾಣ, ಕಟ್ಟಡಗಳ ದುರಸ್ತಿ, ಆಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.

’50:50 ಅನುಪಾತದಲ್ಲಿ ಅಲ್ಪಸಂಖ್ಯಾತ ಇಲಾಖೆಯ ಸಹಯೋಗದಡಿ 48 ಮೌಲಾನಾ ಅಜಾದ್, ಮೊರಾರ್ಜಿ ದೇಸಾಯಿ ವಸತಿ ಶಾಲೆ, 34 ಬಿಸಿಎಂ ಹಾಸ್ಟೆಲ್, ₹ 186 ಕೋಟಿಯಲ್ಲಿ ಎಸ್‌ಸಿ, ಎಸ್‌ಟಿ ಹಾಸ್ಟೆಲ್ ನಿರ್ಮಿಸಲಾಗುವುದು.

ಕಲ್ಯಾಣ ಪಥ ಯೋಜನೆಯಡಿ ಗ್ರಾಮೀಣ ರಸ್ತೆಗಳಿಗೆ ₹ 330 ಕೋಟಿ ನೀಡಿದ್ದು, ಶೀಘ್ರವೇ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಮಿನಿ ವಿಧಾನಸೌಧಗಳ ನಿರ್ಮಾಣಕ್ಕೂ ಟೆಂಡರ್ ಕರೆಯಲಾಗಿದೆ’ ಎಂದು ಹೇಳಿದರು.

ಡಾ.ಅಜಯ್ ಸಿಂಗ್ ಶಾಸಕರು ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷಮಂಡಳಿಗೆ ಅನುದಾನವನ್ನು ಸಂಪೂರ್ಣವಾಗಿ ಖರ್ಚು ಮಾಡಲು ಪ್ರತ್ಯೇಕವಾಗಿ 229 ಎಂಜಿನಿಯರ್‌ ಒಳಗೊಂಡ ಎಂಜಿನಿಯರಿಂಗ್ ವಿಭಾಗ ಸ್ಥಾಪನೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸಲಾಗಿದೆ. ಖಾಲಿ ಹುದ್ದೆಗಳ ಭರ್ತಿಗೂ ಕ್ರಮ ವಹಿಸಲಾಗುವುದು.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

7 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

7 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

7 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

7 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

7 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

7 hours ago