12/06/2025 8:15 AM

Translate Language

Home » ಲೈವ್ ನ್ಯೂಸ್ » ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ್ ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ

ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ್ ಕೆಎಎಸ್, ಐಎಎಸ್ ತರಬೇತಿ ಪರೀಕ್ಷಾ ಶುಲ್ಕದಿಂದ ವಿನಾಯಿತಿ

Facebook
X
WhatsApp
Telegram

ಬೆಂಗಳೂರು.20.ಮೇ.25:- ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 2025- 26 ನೇ ಸಾಲಿಗೆ ಐಎಎಸ್, ಕೆಎಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲಾಗುವುದು.

ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ನಡೆಸುವ ಪ್ರವೇಶ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 22 ರವರೆಗೆ ದಿನಾಂಕ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಸಲು ಮೇ 18ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಜೊತೆಗೆ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಈ ಮೊದಲು ಪರೀಕ್ಷಾ ಶುಲ್ಕ ಪಾವತಿಸಿದ್ದಲ್ಲಿ ಅದನ್ನು ಹಿಂತಿರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!