ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ್‌ ಭೇಟಿ: ಕುತೂಹಲ

ಬೆಂಗಳೂರು.10.ಫೆ.25: ರಾಜ್ಯದಲ್ಲಿ ದಲಿತ ಮುಖಂಡರ “ಡಿನ್ನರ್‌ ಸಭೆ’ ಮುಂದೂಡಿಕೆ ಅನಂತರ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿರುವ ಗೃಹ ಸಚಿವ ಡಾ| ಪರಮೇಶ್ವರ್‌, ಸುಮಾರು 45 ನಿಮಿಷಗಳ ಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ದಿಲ್ಲಿ ಫ‌ಲಿತಾಂಶದ ಮರುದಿನವೇ ಅಂದರೆ ರವಿವಾರ ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಭೇಟಿಯಾದ ಡಾ. ಪರಮೇಶ್ವರ್‌, ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನಲ್ಲಿ ಕೇಳಿ ಬರುತ್ತಿರುವ “ಬದಲಾವಣೆ’ ಮಾತುಗಳ ಕುರಿತು ಮಾತುಕತೆ ನಡೆಸಿದರು.

ಈ ವೇಳೆ ಅಧಿಕಾರ ಹಂಚಿಕೆ ಬಗ್ಗೆ ಕೇಳಿಬರುತ್ತಿರುವ ಮಾತುಗಳು ಮತ್ತು ಅದಕ್ಕೆ ಗೃಹ ಸಚಿವರು ನೀಡಿದ ಪ್ರತಿಕ್ರಿಯೆಗಳೂ ಪ್ರಸ್ತಾಪವಾದವು ಎನ್ನಲಾಗಿದೆ.

ತಾವು ದಲಿತ ಮುಖಂಡರ “ಡಿನ್ನರ್‌ ಸಭೆ’ ಕರೆದಿದ್ದು, ಮರುದಿನವೇ ಅದಕ್ಕೆ ಹೈಕಮಾಂಡ್‌ ಬ್ರೇಕ್‌ ಹಾಕಿರುವ ಬಗ್ಗೆ ಸಮು ದಾಯಗಳಲ್ಲಿ ಉಂಟಾದ ಅಸಮಾ ಧಾನ ಗಳ ವಿವರಣೆ ನೀಡಿ ದರು. ಮುಂಬರುವ ದಿನಗಳಲ್ಲಿ ದಲಿತ ಸಮಾವೇಶ ಏರ್ಪಡಿಸುವ ಅವಶ್ಯಕತೆ ಇದೆ.

ಈ ಮೂಲಕ ಸಮಸ್ಯೆಗಳನ್ನು ಚರ್ಚಿಸಲು ಅನುಕೂಲ ಆಗಲಿದೆ. ಹಾಗಾಗಿ, ಇದಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಒಂದು ಬಣ ದಿಲ್ಲಿ ಭೇಟಿಯಂತಹ ಬೆಳವಣಿಗೆ ಗಳು ಚರ್ಚೆಗೆ ಬಂದವು. ಒಟ್ಟಾರೆಯಾಗಿ ತಾವು ವಾರ್ನಿಂಗ್‌ ನೀಡಿದ ಅನಂತರವೂ ಕೇಳಿಬರುತ್ತಿರುವ ಬಣಗಳ ಭಿನ್ನರಾಗಗಳ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಈ ಭೇಟಿ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಇದ್ದರು ಎನ್ನಲಾಗಿದೆ.

ಇದಲ್ಲದೆ, ಈಚೆಗೆ ನಡೆದ ದಲಿತ ಸಚಿವರ ಸಭೆ, ಬೆನ್ನಲ್ಲೇ ಹಮ್ಮಿಕೊಂಡಿದ್ದ ದಲಿತ ನಾಯಕರ ದಿಲ್ಲಿ ಭೇಟಿ ಯೋಜನೆ ಹಾಗೂ ಕೊನೆಯಲ್ಲಿ ಅದರ ಮುಂದೂಡಿಕೆ ವಿಚಾರ ಸೇರಿದಂತೆ ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಕುರಿತು ಭೇಟಿಯಲ್ಲಿ ಚರ್ಚೆ ಆಗಿದೆ ಎಂದೂ ಹೇಳಲಾಗಿದೆ.

ಈ ನಡುವೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ರವಿವಾರ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ನಡುವೆಯೇ ವಾಲ್ಮೀಕಿ ಮಠದಲ್ಲಿ ದಲಿತ ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸತೀಶ್‌ ಜಾರಕಿಹೊಳಿ, ಡಾ. ಎಚ್‌.ಸಿ.ಮಹದೇವಪ್ಪ, ರಾಜಣ್ಣ, ಸಂಸದ ತುಕಾರಾಂ, ಶಾಸಕರಾದ ಕೆ.ಎಸ್‌.ಬಸವಂತಪ್ಪ, ಟಿ. ರಘುಮೂರ್ತಿ, ಕಂಪ್ಲಿ ಗಣೇಶ್‌ ಒಳಗೊಂಡಂತೆ ಇತರರು ಭಾಗಿಯಾಗಿದ್ದರು. ಅನಂತರ ಮೂವರು ಸಚಿವರು ಪ್ರತ್ಯೇಕ ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ.

prajaprabhat

Recent Posts

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

7 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

7 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

7 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

7 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

7 hours ago

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

8 hours ago