Home » ಲೈವ್ ನ್ಯೂಸ್ » ಕಾಂಗ್ರೆಸ್‌ ಪ್ರಕಟಿಸಿದ್ದ ಪ್ರಣಾಳಿಕೆ ದಹಿಸಿ ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರು ಆಕ್ರೋಶ.

ಕಾಂಗ್ರೆಸ್‌ ಪ್ರಕಟಿಸಿದ್ದ ಪ್ರಣಾಳಿಕೆ ದಹಿಸಿ ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರು ಆಕ್ರೋಶ.

Facebook
X
WhatsApp
Telegram

ಕಾಂಗ್ರೆಸ್‌ ಪ್ರಕಟಿಸಿದ್ದ ಪ್ರಣಾಳಿಕೆ ದಹಿಸಿ ಸರ್ಕಾರದ ವಿರುದ್ಧ ಅತಿಥಿ ಉಪನ್ಯಾಸಕರು ಆಕ್ರೋಶ.

ಗದಗ.03. ಡಿಸೆಂಬರ್.25: ಇಂದು ನಗರದಲ್ಲಿ ವಿವಿಧ ಬೇಡಿಕೆಗಳ ಕಾಂಗ್ರೆಸ್‌ ಪ್ರಕಟಿಸಿದ್ದ ಪ್ರಣಾಳಿಕೆ ದಹಿಸಿ ಸರ್ಕಾರದ ವಿರುದ್ಧ ಆಕ್ರೋಶ  ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರತಿಭಟನಕಾರರ  ವ್ಯಕ್ತಪಡಿಸಿದರು.

‘2023ರ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುವ ಭರವಸೆ ನೀಡಿತ್ತು. ಆದರೆ ಅಧಿಕಾರ ಸಿಕ್ಕ ನಂತರ ಅತಿಥಿ ಉಪನ್ಯಾಸಕರನ್ನು ಮರೆತಿದೆ. ಇಷ್ಟು ವರ್ಷಗಳ ಕಾಲ ದುಡಿದಿರುವ ಅತಿಥಿ ಉಪನ್ಯಾಸಕರ ಸೇವಾಭದ್ರತೆ ವಿಷಯದಲ್ಲಿ ಸರ್ಕಾರ ಉದಾಸೀನ ಧೋರಣೆ ತಾಳುವುದು ಸರಿಯಲ್ಲ’ ಎಂದರು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಹನುಮಂತಗೌಡ ಕಲ್ಮನಿ ಮಾತನಾಡಿ, ’15 ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಡಿಮೆ ಗೌರವಧನಕ್ಕೆ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರು ಇಂದು ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಇದಕ್ಕೆ ಸರ್ಕಾರ ಕೈಗೊಂಡಿರುವ ಅಮಾನವೀಯ, ಅವೈಜ್ಞಾನಿಕ ನೀತಿಯೇ ಕಾರಣ’ ಎಂದು ಕಿಡಿಕಾರಿದರು.

‘ಈಗ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯ ಕೌನ್ಸೆಲಿಂಗ್‌ನ್ನು ತಕ್ಷಣ ನಿಲ್ಲಿಸಬೇಕು. ಸೇವಾನುಭವ ಇರುವ ಅತಿಥಿ ಉಪನ್ಯಾಸಕರ ಸೇವೆಗೆ ಸರ್ಕಾರ ಭದ್ರತೆ ನೀಡಬೇಕು. ಇಲ್ಲದಿದ್ದರೆ ಈ ಹೋರಾಟ ಮತ್ತೊಂದು ನರಗುಂದ ಬಂಡಾಯ ಮಾದರಿ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.

ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಮುಂಡರಗಿ ಹೋರಾಟ ಸಮಿತಿಯ ಅಧ್ಯಕ್ಷ ಬಸವರಾಜ ದೇಸಾಯಿ, ಪಂಚಾಕ್ಷರಿ ಗವಾಯಿಗಳ ಕಾಲೇಜಿನ ಪ್ರಾಚಾರ್ಯ ಡಾ.ಆರ್.ಎಸ್. ದಂಡತಿ ಬೆಂಬಲ ಸೂಚಿಸಿದರು.

ಮಂಗಳವಾರ ನಡೆದ ಪ್ರಣಾಳಿಕೆ ದಹನ ಹೋರಾಟದಲ್ಲಿ ವಿಜಯಪುರದ ರಾಮನಗೌಡ ಕಲ್ಲಿ, ಬೆಳ್ತಂಗಡಿಯ ಸಂತೋಷಕುಮಾರ, ಧರ್ಮಸ್ಥಳದ ಗಿರೀಶ್‌ ನಾಯಕ, ಉಡುಪಿಯ ಪವನಕುಮಾರ, ಧಾರವಾಡದ ದಾನೇಶ್ವರಿ, ಶಿರೂರು, ಕುಂದಗೋಳ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.

ನಿಶ್ಚಿತ ಹನುಮಂತಗೌಡ ಕಲ್ಮನಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭ ಆಗುವುದರೊಳಗೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಬೆಳಗಾವಿಯಲ್ಲಿ ನಡೆಯಲಿರುವ ನಮ್ಮ ಹೋರಾಟ ಸರ್ಕಾರಕ್ಕೆ ನಡುಕ ಹುಟ್ಟಿಸುವುದುಚಂದ್ರಕಾಂತೆ ಶಿರೋಳೆ ಕಲಬುರಗಿಯ ಅತಿಥಿ ಉಪನ್ಯಾಸಕಅತಿಥಿ ಉಪನ್ಯಾಸಕರು 10ಕ್ಕೂ ಹೆಚ್ಚು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಾಠ ಹೇಳಿದ್ದಾರೆ. ಆದರೆ ಸರ್ಕಾರ 6 ಸಾವಿರ ಮಂದಿ ಅತಿಥಿ ಉಪನ್ಯಾಸಕರನ್ನು ಹೊರಗಿಟ್ಟು ಕೌನ್ಸೆಲಿಂಗ್‌ ನಡೆಸುತ್ತಿದೆ. ತಕ್ಷಣವೇ ಈ ಪ್ರಕ್ರಿಯೆ ನಿಲ್ಲಿಸಿ ನಮ್ಮನ್ನು ಮುಂದುವರಿಸಬೇಕು’ವಿದ್ಯಾರ್ಥಿಗಳ ಭವಿಷ್ಯ ಕಟ್ಟುವವರಾದರೂ ಈಗ ನಮ್ಮ ಬದುಕು ಬೀದಿಗೆ ಬಂದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್‌ ಉನ್ನತ ಶಿಕ್ಷಣ ಸಚಿವ ಸುಧಾಕರ್‌ ನಮ್ಮ ಹೋರಾಟಕ್ಕೆ ಸ್ಪಂದಿಸಿ ನೆರವಿಗೆ ನಿಲ್ಲುತ್ತಾರೆ ಎಂಬ ಆಶಾಭಾವನೆಯಿಂದ ಏಳು ದಿನಗಳ ಕಾಲ ಕಾಯ್ದೆವು. ಆದರೆ ಅವರು ಈವರೆಗೆ ನಮ್ಮತ್ತ ಕಣ್ಣೆತ್ತಿ ಸಹ ನೋಡಿಲ್ಲ. ಆದಕಾರಣ ಕುಟುಂಬದ ಸಮೇತವಾಗಿ ದಯಾಮರಣ ಕೋರಿ ಸರ್ಕಾರಕ್ಕೆ ಪತ್ರ ಸಲ್ಲಿಸುತ್ತಿದ್ದೇವೆ’ ಎಂದು ಹೊನ್ನಾಳಿಯ ಅತಿಥಿ ಉಪನ್ಯಾಸಕ ಹಲದಪ್ಪ ಹೇಳಿದರು.ದಯಾಮರಣದ ಪತ್ರ ಸಲ್ಲಿಕೆ

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology