08/06/2025 11:03 PM

Translate Language

Home » ಲೈವ್ ನ್ಯೂಸ್ » ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

ಕಾಡಾನೆಗಳಿಂದ ಬೆಳೆ ನಾಶ ತಡೆಗೆ ಕಾರ್ಯಪಡೆ, ಕ್ಷಿಪ್ರ ಸ್ಪಂದನ ತಂಡ

Facebook
X
WhatsApp
Telegram

14 ಬೆಳಗಾವಿ 24 ಇಂದು ಪ್ರತಿವಂದು ಗ್ರಾಮದಲ್ಲಿ ರೈತರು ಮತ್ತು ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಕಾಡಾನೆಗಳು ಹಿಂಡು ಹಿಂಡಾಗಿ ಜನವಸತಿ ಪ್ರದೇಶಗಳಿಗೆ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದನ್ನು ತಡೆಯಲು ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟಿಸುವ ಶಿಬಿರ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ತಿಳಿಸಿದ್ದಾರೆ

ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಈ ತಂಡಗಳು ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸ್ಥಳೀಯ ಸಾರ್ವಜನಿಕರನ್ನು ಸಂಪರ್ಕಿಸಿ, ಆನೆಗಳ ಚಲನವಲನಗಳ ಮಾಹಿತಿ ನೀಡಿ, ಧ್ವನಿವರ್ಧಗಳ ಮೂಲಕ ಎಚ್ಚರಿಸುತ್ತಿವೆ ಎಂದು ಹೇಳಿದ್ದಾರೆ.

ಕಾಡಾನೆ ಮತ್ತು ಇನ್ನಿತರ ವನ್ಯಪ್ರಾಣಿಗಳಿಂದ ಮೃತಪಟ್ಟವರಿಗೆ ಹಾಗೂ ಬೆಳೆಹಾನಿಯಾದರೆ ನಿಯಾಮನುಸಾರ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿನ ಆನೆ ಹಾವಳಿ ತಡೆಗೆ ಕೊಡಗು ಮತ್ತು ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್‌ ರಿಲೀಸ್ ಸೆಂಟರ್) ಸ್ಥಾಪಿಸಲು ಯೋಜಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!