ಕಾನೂನು ಪದವೀಧರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ

ಕೊಪ್ಪಳ.08.ಆಗಸ್ಟ್.25: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಭತ್ಯೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿಗೆ ಸೇರಿದವರಾಗಿದ್ದು, ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷವಾಗಿರಬೇಕು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಕಾನೂನು ಪದವಿ ಪೂರ್ಣಗೊಳಿಸಿ 2 ವರ್ಷವಾಗಿರಬೇಕು. ಅಭ್ಯರ್ಥಿಗಳು ಸಲ್ಲಿಸುವ ಮಾಹೆಯಾನ ದಿನಚರಿಯನ್ನು ಪರಿಶೀಲಿಸಿ ತರಬೇತಿ ಭತ್ಯೆಯನ್ನು ಮಂಜೂರು ಮಾಡಲಾಗುವುದು.

ಅಭ್ಯರ್ಥಿಯು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ. ಈ ಬಗ್ಗೆ ಒಂದು ಮುಚ್ಚಳಿಕೆ ಪತ್ರ ನೀಡಬೇಕು. ಒಂದು ವೇಳೆ ಸರ್ಕಾರಿ ಉದ್ಯೋಗ ದೊರಕಿದಲ್ಲಿ ಅಥವಾ ನ್ಯಾಯಾಧೀಶರಾಗಿ ನೇಮಕಾತಿ ಹೊಂದಿದಲ್ಲಿ ಜಿಲ್ಲಾ ಸಮಿತಿಯ ಗಮನಕ್ಕೆ ತಂದು ತರಬೇತಿ ಬಿಡಬಹುದು ಹಾಗೂ ವಿಶೇಷ ಸಂದರ್ಭದಲ್ಲಿ ಬಿಡಬೇಕಾದಲ್ಲಿ ಸರ್ಕಾರದ ಅನುಮತಿ ಪಡೆಯಬೇಕು.

ಈ ತರಬೇತಿಗೆ ಜಿಲ್ಲೆಯಲ್ಲಿ 3 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿ ನಿಗದಿತ ಅರ್ಜಿ ನಮೂನೆಗಳನ್ನು ಉಚಿತವಾಗಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 30ರ ಸಂಜೆ 5 ಗಂಟೆಯೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆಗೆ ಸಂದರ್ಶನ.

ಮಂಗಳೂರು.09.ಆಗಸ್ಟ್.25:- 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದ್ದು, ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿಶ್ವವಿದ್ಯಾನಿಲಯದ…

27 minutes ago

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಶಿಕ್ಷೆ

ಕೊಪ್ಪಳ.08.ಆಗಸ್ಟ್.25: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಧನಂಜಯ ಮಠದ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ…

5 hours ago

ಕೊಪ್ಪಳ: ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ

ಕೊಪ್ಪಳ.08.ಆಗಸ್ಟ್.25: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆಯ…

5 hours ago

ಆಗಸ್ಟ್ 11 ರಿಂದ ಕೆ.ಓ.ಎಸ್ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

ಕೊಪ್ಪಳ.08.ಆಗಸ್ಟ್.25: ಕರ್ನಾಟಕ ಮುಕ್ತ ಶಾಲೆ–ಕೆ.ಓ.ಎಸ್ ಪೂರಕ ಪರೀಕ್ಷೆಗಳು ಆಗಸ್ಟ್ 11ರಿಂದ ಕೊಪ್ಪಳದ ಮುನಿರಾಬಾದ್‌ನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ…

6 hours ago

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ<br>

ಕೊಪ್ಪಳ.08.ಆಗಸ್ಟ್.25: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್ ಅವರು ಆಗಸ್ಟ್ 9 ರಂದು ಶನಿವಾರ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…

6 hours ago

ಅತಿಥಿ ಉಪನ್ಯಾಸಕರ ಸೇವಾ ಸಕ್ರಮಾತಿಗೆ ಕಾನೂನು ಸಚಿವ ಡಾ.ಎಚ್.ಕೆ.ಪಾಟೀಲ್ ಸಮ್ಮತಿ

ಬೆಂಗಳೂರು.08.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಪರವಾಗಿ ವಿಶೇಷ ಕಾನೂನು ನಿಯಮಾವಳಿ ರೂಪಿಸಿ ಯುಜಿಸಿ ಮತ್ತು…

7 hours ago