ಕಾಯಕನಿಷ್ಠೆಯ ಶರಣ ಮಡಿವಾಳ ಮಾಚಿದೇವರು-ಪ್ರೊ.ಪರಮೇಶ್ವರ ನಾಯ್ಕ.ಟಿ


ಬೀದರ.02ಫೆಬ್ರುವರಿ.25:  ಮಡಿವಾಳ ಮಾಚಿದೇವರು 12ನೆಯ ಶತಮಾನದ ಅಪ್ರತಿಮ ಶರಣರು, ಮಾಚಿದೇವರು ಜನರ, ಸಮಾಜದ ಮನೆ-ಮನಗಳನ್ನು ಶುಚಿಗೊಳಿಸುವ ಕಾಯಕದಲ್ಲಿ ನಿರತರಾದವರು ಎಂದು ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪoನ ಕುಲಸಚಿವರಾದ ಪ್ರೊ.ಪರಮೇಶ್ವರ ನಾಯ್ಕ.ಟಿ. ಹೇಳಿದರು.


ಅವರು ಇಂದು ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವೀರಗಣಾಚಾರಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.


ವಿಶ್ವಸಾಹಿತ್ಯಕ್ಕೆ ಶರಣರು ನೀಡಿದ ವಚನ ಸಾಹಿತ್ಯ ಅಪೂರ್ವವಾದುದು, ಇಂತಹ ಅಪೂರ್ವ ವಚನ ಸಾಹಿತ್ಯವನ್ನು ಸಂರಕ್ಷಿಸುವ ಕಾಯಕವನ್ನು ನಿರ್ವಹಿಸಿದವರು ಶರಣ ಮಡಿವಾಳ ಮಾಚಿದೇವರು.

‘ಕಲಿದೇವರ ದೇವಾ’ ಅಂಕಿತದಲ್ಲಿ ನೂರಾರು ವಚನಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿರುವ ಮಡಿವಾಳ ಮಾಚಿದೇವರು ಸಮಾಜದಲ್ಲಿನ ಶೋಷಣೆಯ ವಿರುದ್ಧ ಹೋರಾಡಿ ಸಮಾನತೆಗಾಗಿ ಹಂಬಲಿಸಿದವರು.

ಅಂದಿನ ಕಾಲದ ವೀರಯೋಧರಾಗಿದ್ದ ಮಡಿವಾಳ ಮಾಚಿದೇವರು ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ವಚನಗಳ ಕಟ್ಟುಗಳ ರಕ್ಷಣೆಗೈದ ಅಪ್ಪಟ ಶರಣರು, ಸುಂದರ ಸಮಾಜದ ಕನಸುಗಾರರಾಗಿದ್ದ ಶರಣರು ನುಡಿದಂತೆ ನಡೆದರು, ನಡೆದಂತೆ ನುಡಿದರು. ಕಲ್ಯಾಣದ ಅನುಭವ ಮಂಟಪದಲ್ಲಿ ಬಸವಾದಿ ಶರಣರು ಒಂದೆಡೆ ಸೇರಿ ಸಮಾಜಕ್ಕೆ ಅನುಭವಾಮೃತವನ್ನು ನೀಡುತ್ತಿದ್ದರು. ವಚನಗಳ ಕಟ್ಟುಗಳನ್ನು ರಕ್ಷಿಸುವಲ್ಲಿ ಮಡಿವಾಳ ಮಾಚಿದೇವರ ಪಾತ್ರ ಮಹತ್ವದ್ದಾಗಿದೆ ಎಂದು ನುಡಿದರು.


     ಈ ಸಂದರ್ಭದಲ್ಲಿ ಬೀದರ ವಿಶ್ವವಿದ್ಯಾಲಯದ ವಿಶೇಷಾಧಿಕಾರಿಗಳಾದ ಡಾ.ರವೀಂದ್ರನಾಥ ವಿ.ಗಬಾಡಿ, ಬೀದರ ವಿಶ್ವವಿದ್ಯಾಲಯದ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Share
Published by
prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago