05/08/2025 5:17 AM

Translate Language

Home » ಲೈವ್ ನ್ಯೂಸ್ » ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಶ್ಲಾಘನೀಯ – ಮಹೇಶ ಮಾಲಗಿತ್ತಿ

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಶ್ಲಾಘನೀಯ – ಮಹೇಶ ಮಾಲಗಿತ್ತಿ

Facebook
X
WhatsApp
Telegram

ಕೊಪ್ಪಳ.09.ಜುಲೈ.25:-ಸೈಯೂಜ್, ಉಮೇಶ ಕಾಮನೂರು, ಇಂಧುದರ ಸೊಪ್ಪಿಮಠ, ಕಾರ್ಯದರ್ಶಿ ನಿಂಗಪ್ಪ ಗಾಣಿಗೇರ, ಮಲ್ಲಿಕಾರ್ಜುನ ಸಜ್ಜನ ಇದ್ದರು.



ನಿವೃತ್ತ ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಧರ ಪೊಲೀಸ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರನ್ನು ಸ್ಮರಿಸುವುದು ಶ್ಲಾಘನೀಯ – ಮಹೇಶ ಮಾಲಗಿತ್ತಿ

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವುದು ಮತ್ತು ಅವರ ಕುಟುಂಬದವರನ್ನು ಗೌರವಿಸುವ ಕಾರ್ಯ ಶ್ಲಾಘನೀಯ ಎಂದು ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದ್ದಾರೆ.

ನಗರದ ನಿವೃತ್ತಿ ಸೈನಿಕರ ಸಂಘದ ಕಾರ್ಯಾಲಯದಲ್ಲಿ  ಕೇಂದ್ರ ಸರ್ಕಾರ ಸೇನೆಯ ವತಿಯಿಂದ ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮದಡಿಯಲ್ಲಿ ಕಾರ್ಗಿಲ್ ಹುತಾತ್ಮ ಯೋಧರ ಪತ್ನಿಯರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದು, ಅತ್ಯಂತ ಗೌರವದ ಕಾರ್ಯವಾಗಿದೆ. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರದವರನ್ನು ಸ್ಮರಿಸುವುದಕ್ಕಾಗಿ  ಕೇಂದ್ರ ಸರ್ಕಾರಿ ಘರ್ ಘರ ಶೌರ್ಯ ಸನ್ಮಾನ ಮಾಡುವ ಮೂಲಕ ಮತ್ತೆ ಆ ಹೋರಾಟವನ್ನು ನಾಡಿಗೆ ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಕಾರ್ಗಿಲ್ ಯುದ್ಧದ ರೋಚಕತೆ ಮತ್ತು ಅಲ್ಲಿಯ ಸೈನಿಕರ ಹೋರಾಟ ಸಾಮಾನ್ಯವಲ್ಲ. ಆಗಿನ ಸ್ಥಿತಿಯಲ್ಲಿ ಅಲ್ಲಿಯ ವಾತವಾರಣದಲ್ಲಿ ಸೇನೆ ಹೋರಾಟ ಮಾಡಿದ್ದನ್ನು ಪದಗಳಲ್ಲಿ ಹೇಳಲು ಸಾಧ್ಯವೇ ಇಲ್ಲ ಎಂದರು.

ನಾನು ಸಹ ಆ ಯುದ್ಧದಲ್ಲಿ ಭಾಗಿಯಾಗಿದ್ದೆ ಎಂದು  ತಮ್ಮ ಹೋರಾಟದ ನೆನಪನ್ನು ಸ್ಮರಿಸಿದರು. ಕೊಪ್ಪಳ ತಾಲೂಕಿನ ಅಳವಂಡಿ ವೀರಯೋಧ ಮಲ್ಲಯ್ಯ ಮೇಗಳಮಠ ಅವರು  ಈ ಯುದ್ಧದಲ್ಲಿ ಹೋರಾಡಿ ಹುತಾತ್ಮರಾಗಿದ್ದರು. ಈಗ ಅವರನ್ನು ಪುನಃ ಸ್ಮರಿಸುವುದು ಮತ್ತು ಅವರ ಕುಟುಂಬವನ್ನು ಸನ್ಮಾನಿಸುತ್ತಿರುವುದು ನಿಜಕ್ಕೂ ಅರ್ಥಪೂರ್ಣ ಎಂದರು.

ನಿವೃತ್ತ ಸೈನಿಕರು ಸಾಕಷ್ಟು ಬೇಡಿಕೆಗಳು ಇದ್ದು, ಅವುಗಳನ್ನು ಈಡೇರಿಸುವ ಪ್ರಯತ್ನವನ್ನು ನಾನು ಪ್ರಮಾಣಿಕವಾಗಿ ಮಾಡಿದ್ದೇನೆ. ಆದರೂ ಕಾನೂನು ಸಮಸ್ಯೆಯಿಂದ ತೊಡಕಾಗಿದ್ದರಿಂದ  ಆಗಿಲ್ಲ. ಇನ್ನಾದರೂ ಈಡೇರಿಸುವ ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.

ನಿವೃತ್ತ ಸೈನಿಕರ ಸಂಘದ  ಅಧ್ಯಕ್ಷ ಮಾರುತಿ ಗೊಂದಿ ಅವರು ಮಾತನಾಡಿ, ಸೈನಿಕರನ್ನು ಕಾರ್ಗಿಲ್ ವಿಜಯ ದಿವಸ ಸ್ಮರಿಸುತ್ತಾರೆ, ಆದರೆ ನಂತರ ಮರೆತುಬಿಡುತ್ತಾರೆ ಎಂದು ವಿಷಾಧ ವ್ಯಕ್ತಪಡಿಸಿದರು.

ಸೈನಿಕರು ನಿವೃತ್ತಿಯಾದ ಮೇಲೆ ಅವರಿಗೆ ದೊರೆಯಬೇಕಾದ ಗೌರವ ದೊರೆಯುತ್ತಿಲ್ಲ. ಸಿಗಬೇಕಾದ ಸೌಲತ್ತುಗಳು ಸಿಗುತ್ತಿಲ್ಲ. ಇದಕ್ಕಾಗಿ ಹೋರಾಟ ಮಾಡಬೇಕಾಗಿದೆ ಎಂದರು.

ಸೇನೆಯ ಪರವಾಗಿ ಆಗಮಿಸಿದ್ದ ನಾಯಕ ಸುಭೇದಾರ ತಿಲಕ್ ಅವರು ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ಹೋರಾಟ ಮಾಡಿ, ಹುತಾತ್ಮರಾದವರ ಕುಟಂಬದವರನ್ನು ಗೌರವಿಸುವುದಕ್ಕಾಗಿ ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದರಂತೆ ದೇಶದಾದ್ಯಂತ 521 ಕುಟುಂಬದವರ ಬಳಿಗೆ ಸೇನೆ ತೆರಳಿ, ಗೌರವಿಸುತ್ತಿದೆ.  ರಾಜ್ಯದಲ್ಲಿಯೂ ನಾಲ್ವರು ಯೋಧರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದು, ಅವರನ್ನು ಗೌರವಿಸಲಾಗುತ್ತಿದೆ.

ಕೊಪ್ಪಳದಲ್ಲಿ ಮಲ್ಲಯ್ಯಮೇಗಳಮಠ ಅವರ ಪತ್ನಿ ಸರೋಜಾ ಹಾಗೂ ಶಿವಬಸಯ್ಯ ಕುಲಕರ್ಣಿ ಅವರ ಪತ್ನಿ ನಿರ್ಮಲಾ ಅವರನ್ನು  ಘರ್ ಘರ್ ಶೌರ್ಯ  ಸನ್ಮಾನ ಕಾರ್ಯಕ್ರಮದಡಿ ಸ್ಥಳೀಯ ನಿವೃತ್ತ ಸೈನಿಕರ ಸಂಘದ ಸಹಯೋಗದಲ್ಲಿ ಸನ್ಮಾನಿಸಿ, ಪ್ರಸಂಶನಾ ಪತ್ರ ನೀಡಲಾಗಿದೆ ಎಂದರು.

ತಹಸೀಲ್ದಾರ ವಿಠ್ಠಲ್ ಚೌಗಲಿ, ಸಂತರಾಮ ಭಟ್, ದ್ರಾಕ್ಷಾಯಿಣಿ ಕೊಪ್ಪಳ, ಸರೋಜಮ್ಮ ಮೇಗಳಮಠ, ನಿರ್ಮಲಾ ಕುಲಕರ್ಣಿ,  ಸೈನಿಕರಾದ ರಜೀಸ್, ಲಕ್ಷ್ಮಣ ಅಸುಂಡಿ, ಸೈಯೂಜ್, ಉಮೇಶ ಕಾಮನೂರು, ಇಂಧುದರ ಸೊಪ್ಪಿಮಠ, ಕಾರ್ಯದರ್ಶಿ ನಿಂಗಪ್ಪ ಗಾಣಿಗೇರ, ಮಲ್ಲಿಕಾರ್ಜುನ ಸಜ್ಜನ ಇದ್ದರು.

ನಿವೃತ್ತ ಸೈನಿಕರ ಸಂಘದ ಉಪಾಧ್ಯಕ್ಷ ಶ್ರೀಧರ ಪೊಲೀಸ್ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.

9ಕೆಪಿಎಲ್23,24 ನಗರದ ನಿವೃತ್ತ ಸೈನಿಕರ ಸಂಘದ ಕಾರ್ಯಾಲಯದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಕುಟುಂಬದವರನ್ನು ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮದ ಅಡಿಯಲ್ಲಿ ಸೇನೆಯ ವತಿಯಿಂದ ಸನ್ಮಾನಿಸಲಾಯಿತು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD