|

ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ.

ಬೀದರ.17.ಏಪ್ರಿಲ್.25:- ಜಿಲ್ಲಾದ್ಯಂತ ಏಪ್ರಿಲ್.26 ರಿಂದ ಜೂನ್.4 ರವರೆಗೆ ಹಮ್ಮಿಕೊಳ್ಳಲಾದ ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.


ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ  NADCP-FMD-CP  7ನೇ ಸುತ್ತಿನ ಜಾನುವಾರುಗಳಿಗೆ ಸಾಮೂಹಿಕ ಲಸಿಕಾ ಕಾರ್ಯಕ್ರಮ ಅನುಷ್ಠಾನದ ಜಿಲ್ಲಾ ಮಟ್ಟದ ಪರಿಶೀಲನಾ ಮತ್ತು ನಿರ್ವಹಣೆ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.


ಗ್ರಾಮ ಪಂಚಾಯಿತಿ ಪಿಡಿಒ ಮೂಲಕ ಹಾಗೂ ನಗರಗಳಲ್ಲಿ ಆಡಿಯೋ ಕ್ಲಿಪ್ ಮೂಲಕ ಲಸಿಕೆ ಬಗ್ಗೆ ಪ್ರಚಾರ ನೀಡಬೇಕು ಎಂದು ತಿಳಿಸಿದರು. ಅದೇ ರೀತಿ ಪಶು ಸಖಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಲಸಿಕೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.


ಈ ಸಭೆಯಲ್ಲಿ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ನರಸಪ್ಪ ಎ.ಡಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್.ಎಚ್, ಜಿಲ್ಲೆಯ ಎಲ್ಲಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Similar Posts

Leave a Reply

Your email address will not be published. Required fields are marked *