ಬೀದರ.17.ಏಪ್ರಿಲ್.25:- ಜಿಲ್ಲಾದ್ಯಂತ ಏಪ್ರಿಲ್.26 ರಿಂದ ಜೂನ್.4 ರವರೆಗೆ ಹಮ್ಮಿಕೊಳ್ಳಲಾದ ಜಾನುವಾರುಗಳಿಗೆ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ NADCP-FMD-CP 7ನೇ ಸುತ್ತಿನ ಜಾನುವಾರುಗಳಿಗೆ ಸಾಮೂಹಿಕ ಲಸಿಕಾ ಕಾರ್ಯಕ್ರಮ ಅನುಷ್ಠಾನದ ಜಿಲ್ಲಾ ಮಟ್ಟದ ಪರಿಶೀಲನಾ ಮತ್ತು ನಿರ್ವಹಣೆ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಪಿಡಿಒ ಮೂಲಕ ಹಾಗೂ ನಗರಗಳಲ್ಲಿ ಆಡಿಯೋ ಕ್ಲಿಪ್ ಮೂಲಕ ಲಸಿಕೆ ಬಗ್ಗೆ ಪ್ರಚಾರ ನೀಡಬೇಕು ಎಂದು ತಿಳಿಸಿದರು. ಅದೇ ರೀತಿ ಪಶು ಸಖಿಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಲಸಿಕೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಈ ಸಭೆಯಲ್ಲಿ ಪಶು ಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ನರಸಪ್ಪ ಎ.ಡಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ ಎಮ್.ಎಚ್, ಜಿಲ್ಲೆಯ ಎಲ್ಲಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…