ಕಾಲೇಜಿನ ಮೂವರು ಉಪನ್ಯಾಸಕರು ಪೊಲೀಸ್ ಕಸ್ಟಡಿಯಲ್ಲಿ!

ದಕ್ಷಿಣ ಕನ್ನಡ.16.ಜುಲೈ.25:- ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜೊಂದರ ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ, ಆಕೆಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಇಬ್ಬರು ಶಿಕ್ಷಕರು ಮತ್ತು ಅವರ ಸ್ನೇಹಿತನನ್ನು ಬಂಧಿಸಲಾಗಿದೆ. ಮೂಡುಬಿದಿರೆಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರಿಗೆ ಬೆಂಗಳೂರಿನಲ್ಲಿ ರೂಮು ಕೊಟ್ಟ ಅನೂಪ್ ಸೇರಿ ಮೂವರೂ ಅತ್ಯಾಚಾರ ಮಾಡಿದ್ದಾರೆ.

ಮೊದಲನೆಯದಾಗಿ ವಿದ್ಯಾರ್ಥಿನಿಯ ಸಲುಗೆ ಬೆಳೆಸಿ ನರೇಂದ್ರ ಎಂಬ ಉಪನ್ಯಾಸಕ ಬೆಂಗಳೂರಿಗೆ ಕರೆತಂದು ಅತ್ಯಾಚಾರ ಮಾಡಿದ್ದು, ಈ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡು ಆಕೆಯನ್ನು ಬೆದರಿಸಿ ಮತ್ತಿಬ್ಬರು ಸಮಯ ಸಾಧಿಸಿ ಆಕೆಯನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ.

ಹೌದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಉತ್ತಮ ಜೀವನ ರೂಪಿಸಬೇಕಾದ ಉಪನ್ಯಾಸಕರೇ ವಿದ್ಯಾರ್ಥಿನಿಯನ್ನು ಹುರಿದು ಮುಕ್ಕಿದ ಘಟನೆ ಇದೀಗ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಇದೀಗ ಸಂತ್ರಸ್ತ ವಿದ್ಯಾರ್ಥಿನಿಯ ತಂದೆ ತಾಯಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಮಹಿಳಾ ಆಯೋಗದ ರಕ್ಷಣೆಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ಕರೆದೊಯ್ದು ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇದರ ಬೆನ್ನಲ್ಲಿಯೇ ಮೂವರು ಅತ್ಯಾಚಾರಿ ಉಪನ್ಯಾಸಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,

ಘಟನೆಯ ವಿವರ:

ಮೂಡುಬಿದಿರೆ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ನೋಟ್ಸ್ ನೀಡುವ ನೆಪದಲ್ಲಿ ಫಿಸಿಕ್ಸ್ ಉಪನ್ಯಾಸಕ ನರೇಂದ್ರ ಹತ್ತಿರವಾಗಿದ್ದನು. ಬಳಿಕ ಹಂತ ಹಂತವಾಗಿ ಚಾಟ್ ಮಾಡಿ ಸ್ನೇಹ ಬೆಳಸಿಕೊಂಡಿದ್ದನು. ಇದಾದ ಬಳಿಕ ಯುವತಿಯನ್ನು ತೀರಾ ಸಲುಗೆಗೆ ಬಳಸಿಕೊಂಡು ಬೆಂಗಳೂರಿನ ತನ್ನ ಸ್ನೇಹಿತನ ರೂಮಿಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ನಂತರ, ಈ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಇದರಿಂದ ಕಾಲೇಜು ಶಿಕ್ಷಣದಲ್ಲಿ ವ್ಯತ್ಯಾಸ ಉಂಟಾಗಬಹುದೆಂದು ವಿದ್ಯಾರ್ಥಿನಿ ನಡೆದ ವಿಚಾರವನ್ನು ಯಾರಿಗೂ ಹೇಳದೇ ಸುಮ್ಮನಾಗಿ, ನೋವು ಅನುಭವಿದ್ದಳು.

ಇದಾದ ಕೆಲ ದಿನಗಳ ಬಳಿಕ ಬಯೋಲಜಿ ಲೆಕ್ಚರ್ ಸಂದೀಪ್ ಸಹ ಯುವತಿಯನ್ನು ದೈಹಿಕವಾಗಿ ಬಳಕೆ ಮಾಡಿಕೊಳ್ಳಲು ಪ್ರಯತ್ನ ಮಾಡಿದ್ದಾನೆ. ಈ ವೇಳೆ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದ್ದಾಳೆ. ಆದರೆ, ನೀನು ನರೇಂದ್ರ ಸರ್ ಜೊತೆಗೆ ಖಾಸಗಿಯಾಗಿ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ ಎಂದು ಬ್ಲಾಕ್ ಮೇಲ್ ಮಾಡಿದ್ದಾನೆ. ನಂತರ, ನಿನ್ನ ಫೋಟೊ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ರಿಲೀಸ್ ಮಾಡುವುದಾಗಿ ಹಾಗೂ ಕಾಲೇಜಿಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ. ಇದರಿಂದ ತನ್ನ ಜೀವನ ಹಾಳಾಗುವುದೆಂದು ಯುವತಿ ಭಯಗೊಂದು ಉಪನ್ಯಾಸಕ ಸಂದೀಪನಿಗೂ ದೇಹ ಒಪ್ಪಿಸಲು ಮುಂದಾಗಿದ್ದಾಳೆ.  ಆಂಗ್ಲೋ ಲೆಕ್ಚರ್ ಸಂದೀಪ್ ಕೂಡ ಅನೂಪ್ ಎಂಬುವವರ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಇಷ್ಟಕ್ಕೆ ಮುಗಿಯಲಿಲ್ಲ ಕಾಮುಕರ ಅಟ್ಟಹಾಸ:

ವಿದ್ಯಾರ್ಥಿನಿ ಇಬ್ಬರು ಲೆಕ್ಚರ್ ಕೈಗೆ ಸಿಕ್ಕು ನೋವು ಅನುಭವಿಸಿದ್ದರೂ ಕಾಮುಕರ ಅಟ್ಟಹಾಸ ಮಾತ್ರ ಮುಗಿದಿರಲಿಲ್ಲ. ಉಪನ್ಯಾಸಕರಾದ ನರೇಂದ್ರ ಮತ್ತು ಸಂದೀಪನ ಬಳಿಕ ಅವರಿಬ್ಬರಿಗೂ ರೂಮು ಕೊಟ್ಟಿದ್ದ ಅನೂಪ್ ವಿದ್ಯಾರ್ಥಿನಿಯ ಮೇಲೆ ಕಣ್ಣು ಹಾಕುತ್ತಾನೆ. ಯುವತಿಗೆ ನೀನು ನನ್ನೊಂದಿಗೆ ಬರಬೇಕು ಎಂದು ಒತ್ತಾಯ ಮಾಡುತ್ತಾನೆ. ಇದಕ್ಕೊಪ್ಪದಿದ್ದಾಗ ನೀನು ನನ್ನ ರೂಮಿಗೆ ಬಂದಿರೋದು ಸಿಸಿಟಿವಿಯಲ್ಲಿ ಇದೆ. ನನ್ನ ರೂಮಿನೊಳಗೆ ಸಿಸಿಟಿವಿ ಇದೆ. ನೀವು ಮಾಡಿದ್ದೆಲ್ಲವೂ ರೆಕಾರ್ಡ್ ಆಗಿದೆ ಎಂದು ಬೆದರಿಕೆ ಹಾಕಿದ್ದಾನೆ.

ಇದಾದ ಬಳಿಕ ಅನೂಪನಿಂದಲೂ ಸಹ ಯುವತಿ ಅತ್ಯಾಚಾರಕ್ಕೊಳಗಾಗಿದ್ದಾಳೆ. ಇಷ್ಟೆಲ್ಲಾ ನಡೆದರೂ ಕಾಮುಕರು ಇನ್ನೂ ಆಕೆಯನ್ನು ಬಳಕೆ ಮಾಡುವ ಹುನ್ನಾರ ತಿಳಿದ ಸಂತ್ರಸ್ತ ಯುವತಿ ತನ್ನ ಮೇಲಾದ ದುರಂತ ಘಟನೆ ಬಗ್ಗೆ ಪೋಷಕರಿಗೆ ಹೇಳಿಕೊಂಡಿದ್ದಾಳೆ.

ಈ ಘಟನೆ ಬಗ್ಗೆ ದೂರು ನೀಡಲು ಬೆಂಗಳೂರಿಗೆ ಬಂದಿದ್ದ ಪೋಷಕರು ಯುವತಿಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಮಹಿಳಾ ಆಯೋಗದಲ್ಲಿ ವಿದ್ಯಾರ್ಥಿನಿಗೆ ಕೌನ್ಸಲಿಂಗ್ ನೀಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸದ್ಯ ಮೂವರು ಆರೋಪಿಗಳನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಾರತಹಳ್ಳಿ ಪೊಲೀಸರಿಂದ ತನಿಖೆ ಮುಂದುವರೆದಿದೆ. ಈ ವಿದ್ಯಾರ್ಥಿನಿಗೂ ಮುಂಚೆಯೇ ಇದೇ ರೀತಿ ಬೇರೆ ಯಾವುದಾದರೂ ವಿದ್ಯಾರ್ಥಿನಿಯರನ್ನು ಬೆದರಿಸಿ ಅತ್ಯಾಚಾರ ಮಾಡಿದ್ದಾರೆಯೇ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ

ಫಿಸಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಮತ್ತೊಬ್ಬ ಉಪನ್ಯಾಸಕನ ಕೃತ್ಯವನ್ನಿಟ್ಟುಕೊಂಡು ಬ್ಲ್ಯಾಕ್ಮೇಲ್, ಮತ್ತೆ ರೇಪ್

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.

ಉಪನ್ಯಾಸಕರ ಸ್ನೇಹಿತನಿಂದಲೂ ಬ್ಲ್ಯಾಕ್ಮೇಲ್, ರೇಪ್

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

prajaprabhat

Recent Posts

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

6 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

14 hours ago