ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.

ದಾವಣಗೆರೆ.03.ಏಪ್ರಿಲ್.25: ರಾಜ್ಯದಲ್ಲಿ ಹೆಚ್ಚು ವಿಶ್ವವಿದ್ಯಾಲಯಗಳ ಸ್ಥಾಪನೆಯಿಂದ ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.ಸಚಿವ ಡಾ. ಎಂ.ಸಿ. ಸುಧಾಕರ ಹೇಳಿದ್ದಾರೆ.

ಮಂಗಳವಾರ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಮಾತನಾಡಿದ ಅವರು ಗುಣಮಟ್ಟದ ಕಾಲೇಜುಗಳ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆಯೇ ಹೊರತು ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆಯಿಂದ ಶಿಕ್ಷಣದ ಗುಣಮಟ್ಟ ಹೆಚ್ಚಾಗುವುದಿಲ್ಲ.

ಹೆಚ್ಚು ವಿಶ್ವವಿದ್ಯಾಲಯ ಸ್ಥಾಪನೆ ಗುಣಮಟ್ಟದ ಶಿಕ್ಷಣಕ್ಕೆ ಪರಿಹಾರವಲ್ಲ. ಕೇವಲ ವಿಶ್ವವಿದ್ಯಾನಿಲಯಗಳನ್ನು ಹೆಚ್ಚಿಸುವುದಿಂದ, ಶಿಕ್ಷಣ ನೀತಿ ಬದಲಾಯಿಸುವುದರಿಂದ ಶೈಕ್ಷಣಿಕ ವಾತಾವರಣ ಬದಲಾಗುವುದಿಲ್ಲ. ಗುಣಮಟ್ಟದ ಶಿಕ್ಷಣ ಇಂದಿನ ಅಗತ್ಯವಾಗಿದೆ. ಆದ್ದರಿಂದ ವಿಶ್ವವಿದ್ಯಾಲಯಗಳಲ್ಲಿರುವ ನ್ಯೂನ್ಯತೆ ಸರಿಪಡಿಸಿ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯಗಳ ಸ್ಥಿತಿಗತಿಗಳ ಕುರಿತು ಅಧ್ಯಯನ ಮಾಡಲು ರಚಿಸಿದ ಸಂಪುಟ ಉಪಸಮಿತಿ, ತನ್ನ ವರದಿಯಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳ ಜತೆಗೆ ಅವುಗಳಿಗೆ ಪರಿಹಾರ ಏನು ಎಂಬ ಸಲಹೆಯನ್ನೂ ನೀಡಲಿದೆ. ವರದಿ ಬಂದ ತಕ್ಷಣ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ ಅನುಷ್ಠಾನಕ್ಕೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 4800ಕ್ಕೂ ಹೆಚ್ಚು ಅನುಮೋದಿತ ಬೋಧಕ ಸಿಬ್ಬಂದಿ ಹುದ್ದೆಗಳಿದ್ದು ಅದರಲ್ಲಿ ಸುಮಾರು 3500 ಖಾಲಿ ಇವೆ. ಅವುಗಳ ಭರ್ತಿಗೆ ಆದ್ಯತೆ ನೀಡಲಾಗುವುದು. ನೇಮಕಾತಿಯೊಂದಿಗೆ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ ಶಿಕ್ಷಣ ನೀತಿಯಲ್ಲಿಯೂ ಅಮೂಲಾಗ್ರ ಬದಲಾವಣೆಯ ಅವಶ್ಯಕತೆ ಇದೆ ಎಂದು ಹೇಳಿದರು.

ಸಿಬ್ಬಂದಿ ಕೊರತೆ ಸೇರಿದಂತೆ ಉನ್ನತ ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿ, ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ, ಉನ್ನತ ಶಿಕ್ಷಣದಲ್ಲೂ ಕೃತಕ ಬುದ್ಧಿಮತ್ತೆಯ ಲಭ್ಯತೆ, ಸೌಲಭ್ಯ ಬಳಕೆ ಮಾಡಿಕೊಳ್ಳುವತ್ತ ಪ್ರಯತ್ನ ನಡೆಯಬೇಕಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾನ್ಯತೆ ಸಿಗುವಂತೆ ಮಾಡಲು ವಿಶ್ವವಿದ್ಯಾಲಯಗಳ ಮೌಲ್ಯ ಹೆಚ್ಚಿಸಲು ಗಮನ ನೀಡುವುದು ಮುಖ್ಯವಾಗಿದೆ ಎಂದು ಹೇಳಿದರು.

prajaprabhat

Recent Posts

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

10 minutes ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

26 minutes ago

ರಾಯಚೂರು | ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…

36 minutes ago

ಔರಾದ (ಬಿ) ತಾಲೂಕಿನಲ್ಲಿ ಕೋಟ್ಯಾಂತರ ರೂಪಾಯಿಗಳ ಅವ್ಯವಹಾರ ಸತತ 3 ವರ್ಷಗಳಿಂದ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.!

ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…

2 hours ago

ಆ.6 ರಂದು ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮ

ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…

3 hours ago

ಅಪರ ಜಿಲ್ಲಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅಧಿಕಾರ ಸ್ವೀಕಾರ

ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…

3 hours ago