ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಮಹತ್ತರ ಸುಧಾರಣೆ ಜಾರಿಗೊಳಿಸುವ ಉದ್ದೇಶಕ್ಕಾಗಿ ವಿಶ್ವ ಬ್ಯಾಂಕಿನಿಂದ 2500 ಕೋಟಿ ರೂ. ಸಾಲ ಪಡೆಯಲು ರಾಜ್ಯ ಸರ್ಕಾರದ ಸಚಿವ ಸಂಪುಟದ ಅನುಮತಿ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.
ಇಂದು ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಪಂ, ಕಾಲೇಜು ಹಾಗೂ ಶಿಕ್ಷಣ ಇಲಾಖೆಯು ಶುಕ್ರವಾರ ಹಮ್ಮಿಕೊಂಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ. ಕೈಗಾರಿಕೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಉದ್ಯೋಗ ಖಾತ್ರಿ ಪಡಿಸುವಂತಹ ಮತ್ತಷ್ಟು ಕೋರ್ಸ್ ಪ್ರಾರಂಭಿಸಲಾಗುವುದು ಎಂದರು.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಆರಂಭಿಸಲಾಗಿರುವ ಎಇಡಿಪಿ ಕೌಶಲ ಆಧಾರಿತ ಪದವಿ ತರಗತಿಗಳಿಗೆ ರಾಜ್ಯದಲ್ಲಿ 1600 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಪದವಿ ವಿದ್ಯಾರ್ಥಿಗಳಿಗೂ ನೇರವಾಗಿ ಉದ್ಯೋಗ ಅವಕಾಶ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ 2024-25ನೇ ಸಾಲಿನಲ್ಲಿ ಕೌಶಲಾಧಾರಿತ ಶೈಕ್ಷಣಿಕ ಕೋರ್ಸು ಪರಿಚಯಿಸಿದೆ.
ಬಿಕಾಂ ಲಾಜಿಸ್ಟಿಕ್, ಇ-ಕಾಮರ್ಸ್, ಬಿಕಾಂ ರೀಟೈಲ್ ಮತ್ತು ಬಿಎಫ್‌ಎಸ್‌ಐ ಕೋರ್ಸ್‌ಗಳನ್ನು ಈ ವರ್ಷ ಆರಂಭಿಸಲಾಗಿದೆ.
ಈ ಕೋರ್ಸಿನ ವಿದ್ಯಾರ್ಥಿಗಳಿಗೆ ಪದವಿ ಜತೆಗೆ ಪ್ರತ್ಯೇಕ ಪಠ್ಯ ಚಟುವಟಿಕೆ ಮೂಲಕ ತರಬೇತಿ ನೀಡಿ ಅಂತಿಮ ವರ್ಷದ ಐದು ಮತ್ತು ಆರನೇ ಸೆಮಿಸ್ಟರ್ ವೇಳೆಗೆ ನೇರವಾಗಿ ಕಂಪನಿಗಳಲ್ಲಿ ಶಿಷ್ಯವೇತನದೊಂದಿಗೆ ಉದ್ಯೋಗಾವಕಾಶ ಒದಗಿಸಲಾಗುವುದು. ಶಿಷ್ಯವೇತನವು ಕನಿಷ್ಠ 8000 ದಿಂದ 20 ಸಾವಿರ ರೂ.ವರೆಗೂ ಇರಲಿದೆ ಎಂದರು.
ಹೊಸ ಮಾದರಿ ಶೈಕ್ಷಣಿಕ ವ್ಯವಸ್ಥೆ ಜಾರಿಗೆ ತಂದು ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಂಡು ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ಪ್ರಯತ್ನಿಸಲಾಗುತ್ತಿದೆ ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಪ್ರಾಂಶುಪಾಲರಾದ ಮುನಿರಾಜು, ಚಂದ್ರಯ್ಯ ಮತ್ತಿತರರು ಇದ್ದರು.
ನೂತನ ಕಟ್ಟಡ ನಿರ್ಮಾಣ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ 5.87 ಕೋಟಿ ರೂ. ವೆಚ್ಚ ಹಾಗೂ 3.18 ಕೋಟಿ ರೂ ವೆಚ್ಚದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ನಂದಿ ಗಿರಿಧಾಮದಲ್ಲಿ ಸಂಪುಟ ಸಭೆ
ನಂದಿ ಗಿರಿಧಾಮದ ರೋಪ್‌ವೇ ಕಾಮಗಾರಿಗೆ ವೇಗ ನೀಡಬೇಕಾಗಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಗಮನ ಸಳೆಯುವ ನಿಟ್ಟಿನಲ್ಲಿ ಸಂಪುಟ ಸಭೆ ಆಯೋಜಿಸುವುದು ಸಹಕಾರಿಯಾಗಲಿದೆ.
ಈ ನಿಟ್ಟಿನಲ್ಲಿ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ ಆಯೋಜಿಸಲು ಚಿಂತಿಸಲಾಗಿದೆ. ಮಹಾತ್ಮ ಗಾಂಧಿ ಅವರು 1927ರಲ್ಲಿ 45 ದಿನ ಹಾಗೂ 1936ರಲ್ಲಿ 20 ದಿನ ಸೇರಿ ಒಟ್ಟು 65 ದಿನ ನಂದಿಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಇಲ್ಲಿನ ವಾತಾವರಣದಲ್ಲಿ ಆರೋಗ್ಯ ಸುಧಾರಿಸಿಕೊಂಡಿದ್ದರು.
ಇವರ ಹೆಜ್ಜೆ ಗುರುತುಗಳಿರುವ ಜಾಗದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂಬ ಚಿಂತನೆ ಇದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಮೊದಲು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಭೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ತಿಳಿಸಿದರು.
ಭವನ ಉದ್ಘಾಟನೆ, ಸಮ್ಮೇಳನಕ್ಕೆ ಸಿದ್ಧತೆ
ಜಿಲ್ಲೆಯಲ್ಲಿ ಆಧುನಿಕ ರೀತಿಯಲ್ಲಿ ಸುಸಜ್ಜಿತ ವಾಗಿ ನಿರ್ಮಾಣವಾಗಿರುವ ಜಿಲ್ಲಾ ಕನ್ನಡ ಭವನವನ್ನು ಜನವರಿ ಅಂತ್ಯದೊಳಗೆ ಇಲ್ಲವೇ ಫೆಬ್ರವರಿಯಲ್ಲಿ ಉದ್ಘಾಟಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ರಾಜ್ಯ ಸರ್ಕಾರ ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಭಾಗಳಲಿ ಸುಧಾರಿಸಲು 2500 ಕೋಟಿ ಸಾಲ ತಕೋತಿದೆ. ಈ ಯೋಜನೆಯಲ್ಲಿ ವಿವಿಧ ಸಾಹಿತ್ಯ ಕಲೆ ಮತ್ತು ಅಭಿವದ್ಧಿ ಮಾಡಲಾಗಿದ್ದು…
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…