ಬೆಂಗಳೂರು.05.ಜೂನ್.25:-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರರ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಮನ್ವಯದ ಕೊರತೆ, ಅಸಮರ್ಪಕ ವ್ಯವಸ್ಥೆ ಹಾಗೂ ಸ್ಪಷ್ಟತೆಯ ಕೊರತೆ ಸೇರಿದಂತೆ ಹಲವು ಅಂಶಗಳು ಕಾರಣವಾಗಿವೆ ಎನ್ನಲಾಗುತ್ತಿದೆ.
ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗಾಯಗೊಂಡವರ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು, ‘ವಿಧಾನಸೌಧದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ, ರ‍್ಯಾಲಿ ನಡೆಯುವ ಬಗ್ಗೆ ಹೆಚ್ಚಿನ ಪೊಲೀಸರಿಗೆ ಮಾಹಿತಿಯೇ ಇರಲಿಲ್ಲ. ಅದೇರೀತಿ, ಆಯೋಜಕರು ಹಾಗೂ ನಮ್ಮ (ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸರ) ನಡುವೆ ಸಂವಹನದ ಕೊರತೆ ಇತ್ತು’ ಎಂದು ತಿಳಿಸಿದ್ದಾರೆ
RCB ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭದಲ್ಲಿ ಸಂಭವಿಸಿದ ಕಾಲ್ತುಳಿತದ ದುರಂತದಲ್ಲಿ 11 ಜನ ಮೃತಪಟ್ಟಿದ್ದು ಹಾಗೂ ಸುಮಾರು ಜನ ಗಾಯಗೊಂಡಿದ್ದು, ವಿವಿಧ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವಂತೆ ಸೂಚನೆ ನೀಡಿದ್ದಾರೆ.
ಅದರನ್ವಯ, ಗಾಯಾಳುಗಳಿಗೆ ಸೂಕ್ತವಾದ ವೈದ್ಯಕೀಯ ನೆರವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಒದಗಿಸಲು ಕ್ರಮ ಕೈಗೊಳ್ಳುವುದು. ಮುಂದುವರೆದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಅಗತ್ಯ ಸಮನ್ವಯ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…