08/06/2025 9:25 PM

Translate Language

Home » ಲೈವ್ ನ್ಯೂಸ್ » ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Facebook
X
WhatsApp
Telegram


ಬೀದರ.01.ಜನವರಿ.25: -ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ, ಅವರಿಗೆ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


2024-25ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರ ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿರುತ್ತದೆ.


  ಅರ್ಹರು ದಿನಾಂಕ:01-02-2025 ರಿಂದ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರದಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ-ಪ್ರತಿಯಲ್ಲಿ ದಿನಾಂಕ:15-02-2025 ರ ಸಾಯಂಕಾಲ 5-30 ಗಂಟೆಯೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!