ಬೀದರ.01.ಜನವರಿ.25: -ಜಿಲ್ಲೆಯಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ, ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ, ಅವರಿಗೆ ಕಿತ್ತೂರ ರಾಣಿ ಚೆನ್ನಮ್ಮ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2024-25ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪ್ರತಿ ವರ್ಷವು ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನದಂದು ಇಲಾಖೆಯ ವತಿಯಿಂದ ಕಿತ್ತೂರ ರಾಣಿ ಚೆನ್ನಮ್ಮ ಇವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿರುತ್ತದೆ.
ಅರ್ಹರು ದಿನಾಂಕ:01-02-2025 ರಿಂದ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರದಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಎಲ್ಲಾ ದಾಖಾಲಾತಿಗಳನ್ನು ದೃಢೀಕರಿಸಿ ದ್ವಿ-ಪ್ರತಿಯಲ್ಲಿ ದಿನಾಂಕ:15-02-2025 ರ ಸಾಯಂಕಾಲ 5-30 ಗಂಟೆಯೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…