Home » ಲೈವ್ ನ್ಯೂಸ್ » ಕುಕನೂರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕುಕನೂರ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಕೊಪ್ಪಳ 11 ಜುಲೈ 26: ಪ್ರತಿ ವರ್ಷದಂತೆ ಈ ವರ್ಷವೂ ಕುಕನೂರು ಜವಾಹರ ನವೋದಯ ವಿದ್ಯಾಲಯದಲ್ಲಿ 2027-28ರ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಅರ್ಜಿಗಳನ್ನು ವೆಬ್‌ಸೈಟ್  https://cbseitms.rail.gov.in/nvs     ನಲ್ಲಿ ಸಲ್ಲಿಸಬಹುದು. ಸುಲಭ ಮತ್ತು ಸರಳ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಪೋಷಕರಿಗೆ ಸಹಾಯವಾಗುವಂತೆ ಇಂಟರ್ನೆಟ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಬಹುದು. ಗ್ರಾಮೀಣ, ನಗರ ಪ್ರದೇಶದ ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ತಮ್ಮ ಜೀವನ ರೂಪಿಸಿಕೊಳ್ಳಲು ಇದೊಂದು ಸುವರ್ಣವಕಾಶವಿದ್ದು, ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.


ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು 2026-27ರ ಶೈಕ್ಷಣಿಕ ವರ್ಷದಲ್ಲಿ 5ನೇ ತರಗತಿಯಲ್ಲಿ, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ ಓದುತ್ತಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, 2026ರ ನವೆಂಬರ್ 28ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology