Home » ಲೈವ್ ನ್ಯೂಸ್ » ಕುರಿ-ಮೇಕೆ ಘಟಕ ಯೋಜನೆ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ

ಕುರಿ-ಮೇಕೆ ಘಟಕ ಯೋಜನೆ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.26.ಫೆಬ್ರವರಿ.26: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2025-26 ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ (10+1) ಕುರಿ-ಮೇಕೆ ಘಟಕ ಯೋಜನೆಯ ಅನುಷ್ಠಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ (10+1) ಕುರಿ/ಮೇಕೆ ಘಟಕಕ್ಕೆ 1 ಲಕ್ಷ ಘಟಕದ ವೆಚ್ಚವನ್ನು ನಿಗದಿಪಡಿಸಿ ಶೇ.90 ರಷ್ಟು ಸಹಾಯಧನ ಮತ್ತು ಶೇ.10 ರಷ್ಟು ಫಲಾನುಭವಿ ವಂತಿಕೆ ಅಥವಾ ಬ್ಯಾಂಕ್ ಸಾಲದೊಂದಿಗೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಕೊಪ್ಪಳ ಜಿಲ್ಲೆಗೆ ಪರಿಶಿಷ್ಟ ಜಾತಿಗೆ 17, ಪರಿಶಿಷ್ಠ ಪಂಗಡಕ್ಕೆ 10 ಗುರಿಗಳನ್ನು ನಿಗದಿ ಪಡಿಸಿದೆ.
ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿ (ಗುರುತಿನ ಸಂಖ್ಯೆ) ಹೊಂದಿರಬೇಕು.

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು ಮತ್ತು ಕುರಿ-ಮೇಕೆ ಸಾಕಾಣಿಕೆಯಲ್ಲಿ ತೊಡಗಿಸಿಕೊಂಡ ಆಸಕ್ತರನ್ನು ಆಯ್ಕೆ ಮಾಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಆರ್.ಡಿ ನಂಬರ್ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು. ಸರ್ಕಾರದ ನಿಯಮಗಳಂತೆ ವಿಧಾನ ಸಭಾ ಮತಕ್ಷೇತ್ರವಾರು ಹಾಗೂ ಮಹಿಳೆಯರಿಗೆ ಶೇ.33 ರಷ್ಟು, ವಿಶೇಷ ಚೇತನರಿಗೆ ಶೇ.3 ರಷ್ಟು ಆದ್ಯತೆ ನೀಡಲಾಗುವುದು. ಕಳೆದ 5 ವರ್ಷಗಳಲ್ಲಿ ಪಶುಪಾಲನಾ ಇಲಾಖೆ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ವಿವಿಧ ಯೋಜನೆಗಳಲ್ಲಿ ಸಹಾಯಧನ ಸವಲತ್ತು ಪಡೆದಿರುವ ಕುಟುಂಬಗಳು ಮತ್ತೆ ಈ ಯೋಜನೆಯ ಸವಲತ್ತು ಪಡೆಯಲು ಅರ್ಹರಿರುವುದಿಲ್ಲ.

ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನವಾಗಿದ್ದು, ಅರ್ಜಿದಾರರು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್‌ಬುಕ್ ಪ್ರತಿ ಮತ್ತು ಫಲಾನುಭವಿ ಭಾವಚಿತ್ರದ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಕೊಪ್ಪಳ ಇಲ್ಲಿ ಸಂಪರ್ಕಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ಜಿಲ್ಲೆಯ ಅರ್ಹ ಕುರಿ-ಮೇಕೆ ಸಾಕಾಣಿಕೆದಾರರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಕೊಪ್ಪಳ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology