ಶಿವಮೊಗ್ಗ.17ಫೆ.25 : – “ಕುವೆಂಪು ವಿಶ್ವವಿದ್ಯಾಲಯ ಹಾಗೂ ಜರ್ನಲ್ ಆಫ್ ಡೈಲಾಗ್ಸ್ ಆನ್ ನಾಲೆಡ್ಜ್ ಇನ್ ಸೊಸೈಟಿ” ಚೆನ್ನೈ ವತಿಯಿಂದ..
ಫೆಬ್ರವರಿ 20 ರಿಂದ 22 ರ ವರೆಗೆ ಸಮಾಜದಲ್ಲಿ ಜ್ಞಾನ ಎಂಬ ಸಮಾವೇಶವನ್ನು ಕುವೆಂಪು ವಿಶ್ವವಿದ್ಯಾಲಯದ ಬಸವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಫ್ರೋ ಶರತ್ ಅನಂತ ಮೂರ್ತಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಸಮಾಜದಲ್ಲಿನ ಜ್ಞಾನದ ಕುರಿತಾದ ಈ ಸಮಾವೇಶವು 75 ವರ್ಷಗಳ ರಾಷ್ಟ್ರ ನಿರ್ಮಾಣ ಹಾಗೂ ಅಭಿವೃದ್ಧಿಯ ದಾರಿಯಲ್ಲಿ ಜ್ಞಾನದ ಬಗೆಗಿನ ಪ್ರಶ್ನೆಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಶ್ನೆಗಳನ್ನು ಚರ್ಚಿಸುವ ಮುಕ್ತ ವೇದಿಕೆಯಾಗಿದೆ. ದೇಶದ ಅಭಿವೃದ್ಧಿಯಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಪಾತ್ರದ ಬಗ್ಗೆ ಹಿಂದಿನಿಂದಲೂ ಚರ್ಚೆಗಳು ನಡೆಯುತ್ತಿವೆ.
ಆದರೂ ಮಾನವ ಬದುಕಿನ ಇತರೆ ಜ್ಞಾನ ವಲಯಗಳಾದ ಅರ್ಥಶಾಸ್ತ್ರ, ರಾಜಕೀಯ, ಸಮಾಜ ವಿಜ್ಞಾನ, ಕಲೆ ತತ್ವಶಾಸ್ತ್ರ ಸಾಮಾಜಿಕ ಸಂಘಟನೆ ಕುಟುಂಬ ಮುಂತಾದ ವಿಷಯಗಳ ಕುರಿತು ವಿಮರ್ಶಾತ್ಮಕ ಚಿಂತನೆಗಳು ಇದುವರೆಗೆ ನಡೆದಿಲ್ಲ. ಹಾಗೆಯೇ ನ್ಯಾಯ, ಸ್ವಾತಂತ್ರ್ಯ ಹಾಗೂ ಸುಸ್ಥಿರತೆ ಅಂತಹ ವಿಷಯಗಳಿಗೆ ಸಿಕ್ಕಂತಹ ಪ್ರಾಮುಖ್ಯತೆ ಜ್ಞಾನಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಿಕ್ಕಿಲ್ಲ.
ಇದರಿಂದ ಸ್ಪಷ್ಟವಾಗುವುದೇನೆಂದರೆ ನಮ್ಮ ಬಹುಪಾಲು ಬಿಕ್ಕಟ್ಟುಗಳನ್ನು ಪರಿಹರಿಸಿಕೊಳ್ಳಲು ಬಿಕ್ಕಟ್ಟುಗಳ ಒಡಲಲ್ಲೇ ಇರುವ ಜ್ಞಾನ ಮತ್ತು ಅದರ ಮೂಲ ತತ್ವಗಳ ಪ್ರಶ್ನೆಗಳನ್ನು ಎದುರುಗೊಳ್ಳುವುದು ಮುಖ್ಯ ಆದರೆ ಅಧಿಕಾರ ಆಸಕ್ತಿ ಆದ್ಯತೆಗಳ ಆಚೆ ಅದು ಅಂತಹ ಪ್ರಾಮುಖ್ಯತೆಯನ್ನು ಪಡೆದಿಲ್ಲ ಎಂಬುದು ನಮ್ಮ ಅಭಿಪ್ರಾಯ ಈ ಹಿನ್ನಲೆ ಇಂತಹಸಮವೇಶವನ್ನು ಹಮ್ಮಿಕೊಂಡಿದ್ದೇವೆ ಎಂದರು.
ನಮ್ಮ ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಮಾಡಲಾದ ವಿಜ್ಞಾನ ಮತ್ತು ತಂತ್ರಜ್ಞಾನಗಳ ಆಯ್ಕೆಗಳು ಸೇರಿದಂತೆ ಜ್ಞಾನದ ಆಯ್ಕೆಗಳು, ಅದರ ಕಾರಣಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಫಲಿತಾಂಶಗಳ ಮೇಲೆ ಅವುಗಳ ಪ್ರಭಾವವನ್ನು ಪರಿಶೀಲಿಸುವುದು ಸಮಾವೇಶದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.
ಈ ಸಮಾವೇಶವನ್ನು ನಡೆಸಲು ಕಳೆದು 6 ತಿಂಗಳುಗಳಿಂದ ಯೋಚಿಯ ತಯಾರಿಯನ್ನು ನಡೆಸುತ್ತಿದ್ದೇವೆ. ದೇಶದಾದ್ಯಂತ 64 ಜನ ವಿದ್ವಾಂಸರು ಭಾಗವಹಿಸಲಿದ್ದಾರೆ. ಈ 64 ಜನರಲ್ಲಿ ಕಲಾವಿದರು, ಚಿಂತಕರು, ಸಂಗೀತ ವಿದ್ಯಾಂಸರು, ಹೋರಾಟಗಾಗರು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. 3 ದಿನ 8 ಸುದ್ದಿಗೋಷ್ಠಿ ನಡೆಯುತ್ತಿದ್ದು, ಪ್ರತಿ ಗೋಷ್ಠಿಯಲ್ಲಿ 6ರಿಂದ 8 ಜನ ಭಾಗವಹಿಸಲಿದ್ದಾರೆ ಎಂದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಿಶಿಷ್ಟ ಬಾಷಾ ಶಾಸ್ತ್ರಜ್ಙರಾದ ಪ್ರೋ ಜಿ ಎನ್ ದೇವಿ ಮಾಡಲಿದ್ದು, ಅಧ್ಯಕ್ಷತೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಫ್ರೋ ಶರತ್ ಅನಂತ್ ಮೂರ್ತಿ ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಟಿ ಯಲ್ಲಿ ಕುಲಸಚಿವ ಮಂಜುನಾಥ್, ಮೇಟಿ ಮಲ್ಲಿಕಾರ್ಜುನ, ಸತ್ಯಪ್ರಕಾಶ್ ಮತ್ತಿತ್ತರು ಉಪಸ್ಥಿತರಿದ್ದರು
ನಮ್ಮ ಭಾರತ್ ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಮಾಡಲಾದ ವಿಜ್ಞಾನ ಮತ್ತು ತಂತ್ರಜ್ಞಾನಗಳ ಆಯ್ಕೆಗಳು ಸೇರಿದಂತೆ ಜ್ಞಾನದ ಮತ್ತು ತಂತ್ರಜ್ಞಾನ ಆಯ್ಕೆಗಳು ಅಭಿವೃದ್ಧಿ ಸಾಧ್ಯ.
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…
ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಅವರು ಇಂದು ರಾಜಧಾನಿ ರಾಯ್‌ಪುರ…
ಗೂಂಡಾ.03.ಆಗಸ್ಟ್.25:- ಉತ್ತರ ಪ್ರದೇಶದ ಗೊಂಡಾದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.…
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…