|

ಕುಷ್ಟಗಿ ಪುರಸಭೆ: ಆಕ್ಷೇಪಣೆ ಆಹ್ವಾನ

ಕೊಪ್ಪಳ.25.ಜೂನ್.25: ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಮೀಸಲಿಟ್ಟ ನಿವೇಶನವನ್ನು ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕೆ ನೀಡಲು ಉದ್ದೇಶಿಸಲಾಗಿದ್ದು, ಈ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.


ಪಟ್ಟಣದ ಸರ್ವೆ ನಂ. 181/*/6 ವಸತಿ ವಿನ್ಯಾಸದಲ್ಲಿರುವ ಸಾರ್ವಜನಿಕರ ಉಪಯೋಗಕ್ಕಾಗಿ ಮೀಸಲಿಟ್ಟ ನಿವೇಶನವನ್ನು ಸರ್ಕಾರಿ ಹೋಮಿಯೋಪತಿ ಚಿಕಿತ್ಸಾಲಯ ಕಟ್ಟಡ ನಿರ್ಮಾಣಕ್ಕಾಗಿ ನೀಡಲು 2025 ರ ಮೇ 08 ರಂದು ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಒಪ್ಪಿಗೆ ನೀಡಿದ್ದಾರೆ.

ಇದಕ್ಕೆ ಸಂಬAಧಿಸಿದAತೆ ಸಂಬoಧಪಟ್ಟ ಇಲಾಖೆಗೆ ನಿವೇಶನ ಮಂಜೂರು ನೀಡುವಲ್ಲಿ ಸಾರ್ವಜನಿಕರಿಂದ ತಕರಾರುಗಳಿದ್ದಲ್ಲಿ ತಮ್ಮ ತಕರಾರು ಅಥವಾ ಆಕ್ಷೇಪಣೆಗಳನ್ನು ಪ್ರಕಟಣೆಯ ದಿನಾಂಕದಿoದ 15 ದಿನಗಳ ಒಳಗಾಗಿ ಪುರಸಭೆ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಬೇಕು ಎಂದು ಕುಷ್ಟಗಿ   ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *