ಕೊಪ್ಪಳ.02.ಜುಲೈ.25:- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆ ಅಡಿಯಲ್ಲಿ 4 ಯೋಜನೆಯನ್ನು ಜಾರಿಗೊಳಿಸಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿ ನೇತೃತ್ವದ ನಿರ್ಮಾಣ ವಸತಿ ಯೋಜನೆ (ಬಿ.ಎಲ್.ಸಿ), ಪಾಲುಗಾರಿಕೆಯಲ್ಲಿ ಕೈಗೆಟುಕುವ ಬಹುಮಹಡಿ ವಸತಿ ಯೋಜನೆ (ಎ.ಎಚ್.ಪಿ), ಕೈಗೆಟುಕುವ ಬಾಡಿಗೆ ವಸತಿ ಯೋಜನೆ (ಎ.ಆರ್‌ಹೆಚ್) ಹಾಗೂ ಬಡ್ಡಿ ಸಹಾಯಧನ (ಸಬ್ಸಿಡಿ) ವಸತಿ ಯೋಜನೆ (ಐ.ಎಸ್.ಎಸ್) ಯಡಿ ಮಹಿಳಾ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಫಲಾನುಭವಿಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಿಂದ/ಇಲಾಖೆಗಳಿAದ ಯಾವುದೇ ಸಹಾಯಧನ ಪಡೆದು ಮನೆ ನಿರ್ಮಿಸಿಕೊಂಡಿರಬಾರದು. ವಿವಾಹಿತ ಮಹಿಳೆ, ಏಕ ಮಹಿಳಾ ಒಡೆತನದ ಗೃಹಣಿ, ಪುರಷರಾದಲ್ಲಿ ಮಾಜಿ ಯೋಧರು, ವಿಧುರರು, ಅಂಗವಿಕಲರು, ವಿಚ್ಚೇದಿತರು ಅರ್ಜಿಯನ್ನು ಸಲ್ಲಿಸಬಹುದು. ನಿವೇಶನ/ಕಚ್ಚಾಮನೆಯ ಮೂಲ ದಾಖಲೆಗಳನ್ನು ಪರಿಶೀಲನೆ ವೇಳೆಯಲ್ಲಿ ಹಾಜರಪಡಿಸಬೇಕು ಹಾಗೂ ಜಿ.ಪಿ.ಎಸ್ ಆಧಾರಿತ ಫೋಟೋ ನೀಡಬೇಕು. ನಿವೇಶನ ಅಥವಾ ಕಚ್ಚಾಮನೆಯ ಬಗ್ಗೆ ಯಾವುದೇ ಕೌಟಂಬಿಕ ತಕರಾರು ಕೋರ್ಟ್ ಕೇಸ್ ಇತ್ಯಾದಿ ವ್ಯಾಜ್ಯ ಇರಬಾರದು. ಮನೆ ನಿರ್ಮಾಣಕ್ಕೆ ನಿಗದಿಪಡಿಸಿದ ನಿವೇಶನ/ಕಚ್ಚಾಮನೆ ಸ್ಥಳವನ್ನು ಯಾವುದೇ ಕಾರಣಕ್ಕೂ ಬದಲಾಯಿಸುವಂತಿಲ್ಲ.
ಕುಟುoಬದ ಸದಸ್ಯರ ಆಧಾರ ಕಾರ್ಡ್, ಅರ್ಜಿದಾರರ ಇತ್ತೀಚಿನ 2 ಭಾವಚಿತ್ರ, ನಿವೇಶನ/ಕಚ್ಚಾ ಮನೆಗೆ ಸಂಬoಧಿಸಿದ ಇತ್ತೀಚಿನ ಚಾಲ್ತಿ ಉತಾರ ಪ್ರತಿ ಹಾಗೂ ಜಿ.ಪಿ.ಎಸ್ ಆಧಾರಿತ ಫೋಟೋ, ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ ಹಾಗೂ ಮತದಾರರ ಗುರುತಿನ ಚೀಟಿ, ಅರ್ಜಿದಾರರ ರಾಷ್ಟಿçÃಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ಪ್ರತಿ, ಅರ್ಜಿದಾರರ ಹೆಸರಿನಲ್ಲಿ ಅಥವಾ (ಪತಿ/ಪತ್ನಿ) ಅವಿವಾಹಿತ ಮಗ/ಮಗಳು ಹೆಸರಿನಲ್ಲಿ ಸ್ವಂತ ಮನೆ ಹೊಂದಿಲ್ಲ ಎಂಬುದರ ಬಗ್ಗೆ ರೂ 100/- ಛಾಪಾ ಕಾಗದದಲ್ಲಿ ಸ್ವಯಂ ದೃಢೀಕರಣ ಪತ್ರ, ಆಸ್ತಿ ಸದಸ್ಯರ ಹೆಸರಿನಲ್ಲಿದ್ದಲ್ಲಿ ಹಾಗೂ ಜಂಟಿ ಖಾತೆಯಲ್ಲಿದ್ದಲ್ಲಿ ರೂ 100/- ಛಾಪಾ ಕಾಗದದಲ್ಲಿ ತಂಟೆ-ತಕರಾರು ಇಲ್ಲದಿರುವ ಬಗ್ಗೆ ಒಪ್ಪಿಗೆ ಪತ್ರದ ದಾಖಲೆಗಳೊಂದಿಗೆ ನಲ್ಲಿ ಜುಲೈ 15 ರೊಳಗೆ https://pmayyrban.gov.in ಆನ್‌ಲೈನ್ ಅರ್ಜಿ ಸಲ್ಲಿಸಬೇಕು. ನಂತರ ಅರ್ಜಿ ಪ್ರತಿ ಹಾಗೂ ದಾಖಲೆಗಳನ್ನು ಪುರಸಭೆ ಕಾರ್ಯಾಲಯಕ್ಕೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕು.
ಕಡ್ಡಾಯವಾಗಿ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಆಧಾರ ನಂಬರ್ ಬ್ಯಾಂಕ್ ಖಾತೆಗೆ ಜೋಡಣೆಯಾಗಿರುವುದು ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ನಿಗದಿಪಡಿಸಿದ ದಾಖಲೆ ಸಲ್ಲಿಸದ ಹಾಗೂ ಅಪೂರ್ಣ ಅರ್ಜಿಯನ್ನು ತಿರಸ್ಕರಿಸಲಾಗುವುದು. ಅದಕ್ಕೆ ಅವಕಾಶ ಮಾಡಿಕೊಡದೇ ಸರಿಯಾಗಿ ಅರ್ಜಿ ಹಾಗೂ ದಾಖಲಾತಿ ಮಾಹಿತಿಯನ್ನು ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…
ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು…
ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು…